ಬೆಂಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಜನ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಕೆಎಂಎಫ್ ಪ್ರಧಾನ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿ ಆಕ್ಸಿಜನ್ ಕೊರತೆಯಿಂದಾಗಿ ಬಹಳಷ್ಟು ಕೊರೊನಾ ಸೋಂಕಿತರು ಸಾವಿಗೀಡಾಗುತ್ತಿರುವ ಹಿನ್ನೆಲೆಯಲ್ಲಿ ಸೊಂಕಿತರ ಅನುಕೂಲಕ್ಕಾಗಿ 200 ಬೆಡ್, ಆಕ್ಸಿಜನ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಬೆಡ್, ಸಿಲಿಂಡರ್ ಮತ್ತು ಆಕ್ಸಿಜನ್ ಉತ್ಪಾದನೆ ಮಾಡಲು ಸಾಮರ್ಥ್ಯವಿರುವ ಕಂಪನಿಯೊಂದಕ್ಕೆ ಟೆಂಡರ್ ನೀಡಲಾಗುತ್ತಿದೆ. ಸೋಂಕಿತರಿಗೆ ಉಚಿತವಾಗಿ ಆಕ್ಸಿಜನ್ ನೀಡಲು ಯೋಜಿಸಿದ್ದು, ಸರ್ಕಾರಿ ಆಸ್ಪತ್ರೆಯೊಂದನ್ನು ಗುರುತಿಸಿ ಅಲ್ಲಿ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಿ ಕೊಡಲಾಗುವುದು. ಸೋಂಕಿತರಿಗೆ ಈ ಸೌಲಭ್ಯ ಪೂರ್ತಿಯಾಗಿ ಉಚಿತವಾಗಿದ್ದು, ತಿಂಗಳೊಳಗೆ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದು ಹೇಳಿದರು.
ರೈತರ ಬಾಳಿನ ಆಶಾ ಕಿರಣವಾಗಿರುವ ಕೆಎಂಎಫ್ ಪ್ರಸಕ್ತ 2020-21ನೇ ಸಾಲಿನಲ್ಲಿ 170 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿದೆ. ನಿತ್ಯ 81.50 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ 28 ಲಕ್ಷ ಲೀಟರ್ ಹಾಲನ್ನು ಹಾಲಿನ ಪೌಡರನ್ನಾಗಿ ಪರಿವರ್ತಿಸಲಾಗುತ್ತಿದೆ. 52 ಲಕ್ಷ ಲೀ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ. ಕೋವಿಡ್‍ನಂತಹ ಸಂದಿಗ್ಧ ಸಂದರ್ಭದಲ್ಲೂ ರೈತರಿಂದ ಹಾಲನ್ನು ತಪ್ಪದೇ ಸಂಗ್ರಹಿಸಿಕೊಳ್ಳಲಾಗುತ್ತಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನಮ್ಮ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಕೆಎಂಎಫ್‍ನ ಎಲ್ಲ ನೌಕರ ವರ್ಗದವರಿಗೆ ಇನ್ಸೂರನ್ಸ್ ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಲಾಕಡೌನ್ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದನ್ವಯ ಹಾಲು ಮತ್ತು ಹಾಲಿನ ಉತ್ಪನ್ನಗಳ ನಂದಿನಿ ಮಾರಾಟ ಮಳಿಗೆಗಳನ್ನು ದಿನಪೂರ್ತಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಗ್ರಾಹಕರು ಹಾಗೂ ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಮಾರಾಟ ಮಳಿಗೆಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಸಹಕರಿಸುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಹಾಗೂ ಗ್ರಾಹಕರಲ್ಲಿ ಮನವಿ ಮಾಡಿಕೊಂಡರು.
ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಪಶು ಸಂಗೋಪನೆ, ಮಾರುಕಟ್ಟೆ, ಗುಣ ನಿಯಂತ್ರಣ, ಅಭಿಯಂತರರು, ಖರೀದಿ ವಿಭಾಗದ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕೆಎಂಎಫ್‍ನಿಂದ ಕೋವಿಡ್ ಸೋಂಕಿತರಿಗೆ 200 ಆಕ್ಸಿಜನ್ ಬೆಡ್ ಪೂರೈಕೆ: ಬಾಲಚಂದ್ರ ಜಾರಕಿಹೊಳಿ - ಬಾಲಚಂದ್ರ ಜಾರಕಿಹೊಳಿ
ರೈತರ ಬಾಳಿನ ಆಶಾ ಕಿರಣವಾಗಿರುವ ಕೆಎಂಎಫ್ ಪ್ರಸಕ್ತ 2020-21ನೇ ಸಾಲಿನಲ್ಲಿ 170 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿದೆ. ನಿತ್ಯ 81.50 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ 28 ಲಕ್ಷ ಲೀಟರ್ ಹಾಲನ್ನು ಹಾಲಿನ ಪೌಡರನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮಾಹಿತಿ ನೀಡಿದರು.