ETV Bharat / city

ಶುದ್ಧ ಕುಡಿಯುವ ನೀರು ಅಕ್ರಮ ಬಗ್ಗೆ ತನಿಖೆ ನಡೆಸಲು ಜಂಟಿ ಸದನ ಸಮಿತಿ ಸಭೆಯಲ್ಲಿ ಒತ್ತಾಯ - ಜಂಟಿ ಸದನ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ '

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಹಣ ಖರ್ಚಾಗುತ್ತಿರುವ ಬಗ್ಗೆ ಜಂಟಿ ಸದನ ಸಮಿತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

kn-bng-05-drinkingwater-jointcomite-script-7201951
ಶುದ್ಧ ಕುಡಿಯುವ ನೀರು ಅಕ್ರಮ ಬಗ್ಗೆ ತನಿಖೆ ನಡೆಸಲು ಜಂಟಿ ಸದನ ಸಮಿತಿ ಸಭೆಯಲ್ಲಿ ಒತ್ತಾಯ
author img

By

Published : Jul 1, 2021, 4:40 AM IST

ಬೆಂಗಳೂರು: ರಾಜ್ಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ವಿಚಾರದಲ್ಲಿ ನಡೆದಿರುವ ಅವ್ಯವಹಾರ ಕುರಿತು ತನಿಖೆ ನಡೆಸುವ ಬಗ್ಗೆ ಜಂಟಿ ಸದನ ಸಮಿತಿ ಸಭೆಯಲ್ಲಿ ಒತ್ತಾಯಿಸಲಾಗಿದೆ.

ವಿಧಾನಸೌಧದಲ್ಲಿ ಬುಧವಾರ ಜಂಟಿ ಸದನ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಮುಂದಿನ ಸಭೆಯಲ್ಲಿ ಅಧಿಕಾರಿಗಳನ್ನು ಕರೆಯುವ ಬಗ್ಗೆ ತೀರ್ಮಾನಿಸಲಾಗಿದೆ. ರಾಜ್ಯದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ವಿಚಾರದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತಂತೆ ವಿಚಾರಣೆ ನಡೆಸಿ ವರದಿಯನ್ನು ನೀಡಲು ಆರಗ ಜ್ಞಾನೇಂದ್ರ, ಅವರ ಅಧ್ಯಕ್ಷತೆಯಲ್ಲಿ ಜಂಟಿ ಸದನ ಸಮಿತಿ ರಚಿಸಲಾಗಿತ್ತು.

ರಾಜ್ಯದ ಜನತೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ 2013ರಿಂದ ಇದುವರೆಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಅನುಸರಿಸಿರುವ ಮಾನದಂಡಗಳು, ಅವುಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ವಿಧಿಸಲಾಗಿರುವ ಷರತ್ತುಗಳು ಹಾಗೂ ಅನುಸರಿಸಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ.

ಈಗ ಕಾರ್ಯಾಚರಣೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಾಚರಣೆ ಮತ್ತು ಅವುಗಳನ್ನು ವಿವಿಧ ಸಂಘಸಂಸ್ಥೆಗಳು, ಗುತ್ತಿಗೆದಾರರನ್ನು ಆಯ್ಕೆ ಮಾಡಿರುವ ವಿಧಾನ ಸಂಘಸಂಸ್ಥೆಗಳು, ಗುತ್ತಿಗೆದಾರರ ಕಾರ್ಯವೈಖರಿ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಮತ್ತು ನಿರ್ವಹಣೆಗೆ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಹಣ ಖರ್ಚಾಗುತ್ತಿರುವ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ‌..!

ತಾತ್ಕಾಲಿಕವಾಗಿ/ಶಾಶ್ವತವಾಗಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ವಿವರ, ಸ್ಥಗಿತಗೊಳ್ಳಲು ಕಾರಣವಾಗಿರುವ ಅಂಶಗಳು ಮತ್ತು ಸ್ಥಗಿತವಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ‌ ವಿವರಣೆ ಪಡೆಯಲು ನಿರ್ಧರಿಸಲಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆಯಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ನಡೆಸಬೇಕು ಎಂದು ಸಮಿತಿಯ ಸದಸ್ಯರು ಆಗ್ರಹಿಸಿದರು. ನಂತರ ತನಿಖೆ ನಡೆಸಿ ವರದಿ ನೀಡುವ ಬಗ್ಗೆ ಸಮಾಲೋಚನೆ ನಡೆಸಲಾಯಿತು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.