ಬೆಂಗಳೂರು: ವೈಯಕ್ತಿಕ ಕಾರಣಕ್ಕೆ ಶುರುವಾದ ಗಲಾಟೆಯಲ್ಲಿ ಯುವಕನ ಎದೆಗೆ ಚಾಕು ಇರಿದ ಘಟನೆ ಕಾಟನ್ ಪೇಟೆಯ ಗೂಡ್ ಶೆಡ್ ರಸ್ತೆಯಲ್ಲಿ ನಿನ್ನೆ(ಭಾನುವಾರ) ನಡೆದಿದೆ. ಸುನೀಲ್ ಮತ್ತು ಸೂರ್ಯ ಎಂಬ ಇಬ್ಬರು ಆರೋಪಿಗಳು ಸಂದೀಪ್ ಎಂಬ ಯುವಕನ ಎದೆಗೆ ಚಾಕು ಇರಿದಿದ್ದಾರೆ ಎಂದು ತಿಳಿದುಬಂದಿದೆ.
![knife stabbing case](https://etvbharatimages.akamaized.net/etvbharat/prod-images/14985052_thumb.jpg)
ಸಂದೀಪ್ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಯುವತಿಯೊಬ್ಬಳ ವಿಚಾರಕ್ಕೆ ಗಲಾಟೆ ಆರಂಭವಾಗಿದೆ ಎನ್ನಲಾಗ್ತಿದೆ. ಸದ್ಯ ಇಬ್ಬರು ಆರೋಪಿಗಳನ್ನ ಕಾಟನ್ ಪೇಟೆ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಸತಿಯ ಚಿತೆಗೆ ಹಾರಿದ ಪತಿ!