ಬೆಂಗಳೂರು : ಕೋರಮಂಗಲದ ಒಳಾಂಗಣ ಕ್ರೀಡಾಂಗಣವನ್ನು ಕೋವಿಡ್ ರೋಗಿಗಳ ಚಿಕಿತ್ಸಾಲಯವನ್ನಾಗಿ ಪರಿವರ್ತನೆ ಮಾಡಲಾಗುತ್ತಿದೆ.
ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯೂನೈಟೆಡ್ ಸಿಖ್ ಸಂಸ್ಥೆ ಮುಂದಾಳತ್ವದಲ್ಲಿ ಕೋರಮಂಗಲದ ಇಂಡೋರ್ ಸ್ಟೇಡಿಯಂ ಈಗ ಕೋವಿಡ್ ಚಿಕಿತ್ಸಾ ಕೇಂದ್ರವನ್ನಾಗಿ ಸಿದ್ಧಗೊಳ್ಳುತ್ತಿದೆ.
ಸುಮಾರು 200 ಬೆಡ್ಗಳಿರುವ ಕೋವಿಡ್ ಚಿಕಿತ್ಸಾ ಕೇಂದ್ರ ಇದಾಗಲಿದ್ದು, ಯೂನೈಟೆಡ್ ಸಿಖ್ ಸಂಸ್ಥೆ ಎಲ್ಲಾ ಸವಲತ್ತುಗಳನ್ನು ಒದಗಿಸುತ್ತಿದೆ. ಇನ್ನು, ಎರಡ್ಮೂರು ದಿನಗಳಲ್ಲಿ ಚಿಕಿತ್ಸಾ ಕೇಂದ್ರ ಸಿದ್ಧಗೊಳ್ಳಲಿದೆ ಎಂದು ಸಂಸ್ಥೆಯ ಸದಸ್ಯರೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಆರೋಪಗಳಿಂದ ಬಹಳ ನೊಂದಿದ್ದೇನೆ: ಭಾವುಕರಾದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ