ETV Bharat / city

ರಾಮಾಜೋಯಿಸ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ - ರಾಮಾಜೋಯಿಸ್ ಅವರ ನಿಧನಕ್ಕೆ ಸಂತಾಪ

ರಾಮಾಜೋಯಿಸ್ ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಆಪ್ತ ಬಳಗದವರಿಗೆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

ಸಂತಾಪ
ಸಂತಾಪ
author img

By

Published : Feb 16, 2021, 7:23 PM IST

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಮಾಜಿ ರಾಜ್ಯಪಾಲರಾದ ರಾಮಾಜೋಯಿಸ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ರಾಮಾಜೋಯಿಸ್ ಅವರ ನಿಧನ ಸುದ್ದಿ ಕೇಳಿ ಬೇಸರವಾಗಿದೆ. ರಾಮಾಜೋಯಿಸ್ ಅವರು ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು. ಕಾನೂನು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ರಾಮಾಜೋಯಿಸರು ಸರ್ವೀಸ್ ಲಾ, ಕಾನ್ಸ್​ಟಿಟ್ಯೂಷನಲ್ ಲಾ, ಸೇರಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.

ರಾಜ್ಯಸಭೆ ಸದಸ್ಯರಾಗಿದ್ದ ನಂತರ ಜಾರ್ಖಂಡ್, ಬಿಹಾರ ರಾಜ್ಯಗಳ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಆಪ್ತ ಬಳಗದವರಿಗೆ ಭಗವಂತ ಕರುಣಿಸಲಿ ಹಾಗೂ ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಡಿ.ಕೆ. ಶಿವಕುಮಾರ್ ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.