ETV Bharat / city

ಕೊರೊನಾ ನಿಯಂತ್ರಣ, ಪರಿಹಾರ ಕಾರ್ಯಕ್ರಮಗಳ ಪರಿಶೀಲನೆ: ಮೂರು ದಿನ ಡಿಕೆಶಿ ರಾಜ್ಯ ಪ್ರವಾಸ - ಬೆಂಗಳೂರು

ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಮತ್ತು ಪರಿಹಾರ ಕಾರ್ಯಕ್ರಮ ಯಾವ ರೀತಿ ನಡೆಯುತ್ತಿದೆ. ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ನಿಯಂತ್ರಣ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ ತಾಳಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕಲು ಡಿ.ಕೆ ಶಿವಕುಮಾರ್ ಮೂರು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

DK Shivakumar
ಡಿಕೆಶಿ
author img

By

Published : May 30, 2021, 7:37 AM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೇ 30 ಮತ್ತು 31 ಹಾಗೂ ಜೂನ್ 3 ರಂದು ಹುಬ್ಬಳ್ಳಿ-ಧಾರವಾಡ, ಹಾವೇರಿ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ಸಂದರ್ಭ ಜಿಲ್ಲಾ ನಾಯಕರ ಜೊತೆ ಚರ್ಚಿಸುವ ಅವರು ಪಕ್ಷ ಸಂಘಟನೆ ಹಾಗೂ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ. ನಾಳೆ ಸಂಜೆ 3.40 ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವ ಡಿಕೆಶಿ ಸಂಜೆ 5.30ಕ್ಕೆ ಹುಬ್ಬಳ್ಳಿ-ಧಾರವಾಡ ನಗರ ಮತ್ತು ಧಾರವಾಡ ಗ್ರಾಮಾಂತರ ಜಿಲ್ಲೆಗಳಲ್ಲಿ ಪಕ್ಷದ ವತಿಯಿಂದ ಕೈಗೊಂಡಿರುವ ಕೊರೊನಾ ನಿಯಂತ್ರಣ ಮತ್ತು ಪರಿಹಾರ ಕಾರ್ಯಕ್ರಮಗಳ ಪರಿಶೀಲನೆ ನಡೆಸುತ್ತಾರೆ.

ಸಂಜೆ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದು ಈ ಸಂದರ್ಭ ಜಿಲ್ಲಾ ನಾಯಕರ ಜೊತೆ ಚರ್ಚಿಸಲಿದ್ದಾರೆ. ಇದೇ ವೇಳೆ ಪಕ್ಷ ಸಂಘಟನೆ ಹಾಗೂ ಕೋವಿಡ್ ನಿಯಂತ್ರಣದಲ್ಲಿ ಸರ್ಕಾರದ ವಿರುದ್ಧ ಕೈಗೊಳ್ಳಬಹುದಾದ ಹೋರಾಟದ ಕುರಿತು ಮಾತುಕತೆ ನಡೆಸಲಿದ್ದಾರೆ. ಮೇ 31ರಂದು ಬೆಳಗ್ಗೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿಗೆ ಪ್ರಯಾಣ ಬೆಳೆಸುವ ಅವರು, ಮಧ್ಯಾಹ್ನ 12:30 ಕ್ಕೆ ರಾಣೆಬೆನ್ನೂರಿನಲ್ಲಿ ಕೈಗೊಂಡಿರುವ ಕೊರೊನಾ ನಿಯಂತ್ರಣ ಮತ್ತು ಪರಿಹಾರ ಕಾರ್ಯಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ.

ಅಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿಯಲಿದ್ದಾರೆ. ಜೂನ್ 3ರಂದು ಬೆಳಗ್ಗೆ ಬೆಂಗಳೂರಿನಿಂದ ಹೊರಟು 11.30ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಭೇಟಿ ಕೊಡಲಿದ್ದಾರೆ. ಕೋವಿಡ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಪ್ರವಾಸ ಸಂದರ್ಭದಲ್ಲಿ ಕಾರ್ಯಕರ್ತರನ್ನು ಭೇಟಿಯಾಗುವುದಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ಕೇಸ್​ ಆಗಲ್ಲ, ನನ್ನ ಹತ್ತಿರ ಲೈಸನ್ಸ್ ಇದೆ’: ಆಂಬ್ಯುಲೆನ್ಸ್ ಓಡಿಸಿ ಗಮನ ಸೆಳೆದ ಸಚಿವ ಹೆಬ್ಬಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.