ETV Bharat / city

ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ: ಡಿ.ಕೆ ಶಿವಕುಮಾರ್ - ಡಿ.ಕೆ. ಶಿವಕುಮಾರ್

ಶಾಲಾ - ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕಮಾಡುತ್ತಿದ್ದಾರೆ. ಆರ್‌ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಆರೋಪ ಮಾಡಿದ್ದಾರೆ.

KPCC President DK Shivakumar Statement about RSS
ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ: ಡಿ.ಕೆ ಶಿವಕುಮಾರ್
author img

By

Published : Oct 6, 2021, 4:08 PM IST

ಬೆಂಗಳೂರು: ಕುಮಾರಸ್ವಾಮಿ ಆಯ್ತು ಈಗ ಡಿಕೆಶಿ ಸಹ ಆರ್​ಎಸ್​ಎಸ್​ ಬಗ್ಗೆ ಹೊಸ ಬಾಂಬ್​ ಸಿಡಿಸಿದ್ದಾರೆ. ಆರ್‌ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲಾ - ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಸರ್ಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ: ಡಿ.ಕೆ ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ ಅವರು, ಇದು ಆರ್‌ಎಸ್‌ಎಸ್‌ ನವರ ಕಾರ್ಯಾಚರಣೆ ಶೈಲಿ. ಇದನ್ನೇ ನಾವು ಕೇಸರಿಕರಣ ಎಂದು ಹೇಳುತ್ತಿದ್ದೇವೆ. ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ. ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಶಾಸಕರು ಹಾಗೂ ಇತರರು ಕೋವಿಡ್ ಸಮಯದಿಂದಲೂ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಬಿಜೆಪಿ ಆಡಳಿತ ಇರುವ ದೇಶದ ಎಲ್ಲ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದರು.

ರೈತರ ಪ್ರತಿಭಟನೆ ವಿಚಾರವಾಗಿ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್ ಅವರ ಹೇಳಿಕೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಹೇಳಿಕೆಯನ್ನೇ ನೋಡಿ. ಹೇಗೆ ತಿರುಚುತ್ತಿದ್ದಾರೆ ಎಂದು ಗೊತ್ತಾಗುತ್ತದೆ. ಉತ್ತರ ಪ್ರದೇಶ ರೈತರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಶಿವಕುಮಾರ್ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.