ETV Bharat / city

ಡಿಕೆಶಿ ದೆಹಲಿ ಪ್ರವಾಸ: ವಿವಿಧ ಸಮಿತಿಗಳ ಪದಾಧಿಕಾರಿಗಳ ನೇಮಕ ಕುರಿತು ಹೈಕಮಾಂಡ್​ ಜತೆ ಚರ್ಚೆ - ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ

ಕಳೆದ ಕೆಲ ತಿಂಗಳುಗಳಿಂದ ನಡೆಸುತ್ತಿರುವ ಪ್ರಯತ್ನದ ಭಾಗವಾಗಿ ಈ ಸಾರಿಯೂ ಕೆಪಿಸಿಸಿ ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳ ನೇಮಕ ಕುರಿತು ಹೈಕಮಾಂಡ್ ನಾಯಕರ ಜೊತೆ ಡಿಕೆಶಿ ಸಮಾಲೋಚಿಸಲಿದ್ದಾರೆ.

ದೆಹಲಿಗೆ ತೆರೆಳಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ದೆಹಲಿಗೆ ತೆರೆಳಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
author img

By

Published : Sep 26, 2021, 8:25 PM IST

ಬೆಂಗಳೂರು: ರಾಷ್ಟ್ರೀಯ ನಾಯಕರ ಭೇಟಿ ಹಾಗೂ ಚರ್ಚೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿದ್ದ ಪಕ್ಷದ ಕಾರ್ಯಕ್ರಮಗಳನ್ನು ಮುಗಿಸಿ ಮಧ್ಯಾಹ್ನದ ನಂತರ ತೆರಳಿದ ಡಿಕೆಶಿ, ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ವಿವಿಧ ಮುಖಂಡರ ಜೊತೆ ನಾಳೆ ಅವರು ಚರ್ಚಿಸಲಿದ್ದಾರೆ.

ಅವಕಾಶ ಸಿಕ್ಕಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸುವ ಸಾಧ್ಯತೆಯಿದೆ. ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ನಡೆದುಕೊಂಡ ರೀತಿ ಹಾಗೂ ಸರ್ಕಾರದ ಅಸಹಕಾರದ ವಿಚಾರವಾಗಿ ಪಕ್ಷದ ಹೈಕಮಾಂಡ್ ನಾಯಕರಿಗೆ ಮಾಹಿತಿ ಒದಗಿಸಲಿದ್ದಾರೆ.

ಅಲ್ಲದೇ, ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸುವ ಹೋರಾಟಗಳ ಕುರಿತು ಮಾಹಿತಿ ಕೊಡಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕೈಗೊಂಡಿರುವ ಕಾರ್ಯಕ್ರಮಗಳ ಪಟ್ಟಿ ನೀಡಲಿದ್ದಾರೆ.

ಸವಿತಿ ರಚನೆ ಪ್ರಸ್ತಾಪ:

ಕಳೆದ ಕೆಲ ತಿಂಗಳುಗಳಿಂದ ನಡೆಸುತ್ತಿರುವ ಪ್ರಯತ್ನದ ಭಾಗವಾಗಿ ಈ ಸಾರಿಯೂ ಕೆಪಿಸಿಸಿ ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳ ನೇಮಕ ಕುರಿತು ಹೈಕಮಾಂಡ್ ನಾಯಕರ ಜೊತೆ ಡಿಕೆಶಿ ಸಮಾಲೋಚಿಸಲಿದ್ದಾರೆ.

ಈ ಹಿಂದೆಯೂ ಎರಡು ಸಾರಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಪಟ್ಟಿ ನೀಡಿ ಬಂದಿದ್ದವರಿಗೆ ಇದಕ್ಕೆ ಪಕ್ಷದ ಹಿರಿಯ ನಾಯಕರಿಂದ ಹಸಿರು ನಿಶಾನೆ ಸಿಕ್ಕಿರಲಿಲ್ಲ. ಡಿ.ಕೆ.ಶಿವಕುಮಾರ್ ನೀಡಿದ ಪಟ್ಟಿಯಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಗೆ ಅವಕಾಶ ಇಲ್ಲದ ಹಿನ್ನೆಲೆಯಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿತ್ತು.

ಸಿದ್ದರಾಮಯ್ಯ ಬಣದ ಹಲವು ಮುಖಂಡರು ಪಕ್ಷದ ಹೈಕಮಾಂಡ್ ನಾಯಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ಇದೀಗ ಮೂರನೇ ಸಾರಿ ಭೇಟಿ ನೀಡಿದ್ದು, ಅಂತಿಮ ಹಂತದ ಚರ್ಚೆ ನಡೆಸಿ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಾರಿ ದೆಹಲಿ ಭೇಟಿ ಬಳಿಕ ಡಿಕೆಶಿ ವಾಪಸಾಗುತ್ತಿದ್ದಂತೆ ಸಮಿತಿ ಪದಾಧಿಕಾರಿಗಳ ನೇಮಕ ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಇನ್ನಷ್ಟು ಬಲ ಬರಲಿದೆ ಎಂಬ ಮಾತು ಕೇಳಿಬರುತ್ತಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.