ETV Bharat / city

ಅಧಿವೇಶನಕ್ಕಿಂತ ಪಕ್ಷ ಸಂಘಟನೆಗೆ ಒತ್ತು.. ಜಿಲ್ಲಾ ಪ್ರವಾಸಕ್ಕೆ ಹೊರಟು ನಿಂತ ಡಿಕೆಶಿ

author img

By

Published : Mar 20, 2022, 3:20 PM IST

ಉಭಯ ಸದನಗಳ ಅಧಿವೇಶನದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಹೈಕಮಾಂಡ್ ಪಕ್ಷದ ಬಲವರ್ಧನೆಗೆ ಸೂಚಿಸಿರುವ ನಿಟ್ಟಿನಲ್ಲಿ ಡಿಕೆಶಿ ಅಧಿವೇಶನದ ನಡುವೆಯೇ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

kpcc-president-dk-shivakumar-two-days-of-district-tour
ಅಧಿವೇಶನಕಿಂತ ಪಕ್ಷ ಸಂಘಟನೆ ಮುಖ್ಯವೆಂದು ಜಿಲ್ಲಾ ಪ್ರವಾಸಕ್ಕೆ ಹೊರಟು ನಿಂತ ಡಿಕೆಶಿ

ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಅಧಿವೇಶನದಲ್ಲಿ ಪಾಲ್ಗೊಂಡು ಪಕ್ಷದ ನಾಯಕರ ಬಲಪಡಿಸುವುದಕ್ಕಿಂತ ಪಕ್ಷ ಸಂಘಟನೆ ಮುಖ್ಯ ಎಂಬ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರ್ ಬಂದಿದ್ದಾರೆ.

ಈ ಹಿನ್ನೆಲೆ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಮಾರ್ಚ್ 22 ಮತ್ತು 23 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ‌ಯಿಂದ ಪಕ್ಷ ಸಂಘಟನೆ ಹಾಗೂ ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ಕಲಬುರಗಿ, ಬೀದರ್, ಯಾದಗಿರಿ ಮತ್ತು ರಾಯಚೂರು ಜಿಲ್ಲೆಯಾದ್ಯಂತ ಡಿಕೆಶಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಾ.22 ರಂದು‌ 8.40ಕ್ಕೆ ಬೆಂಗಳೂರಿಂದ ವಿಮಾನದ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸುವ ಡಿಕೆಶಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಫ್ಜಲ್​ಪುರ, ಜೇವರ್ಗಿ, ಚಿತ್ತಾಪುರ, ಸೇಡಂ, ಚಿಂಚೋಳಿ, ಕಲಬುರಗಿ ಗ್ರಾಮೀಣ, ಕಲಬುರಗಿ ದಕ್ಷಿಣ, ಕಲಬುರಗಿ ಉತ್ತರ ಹಾಗೂ ಆಳಂದ ವಿಧಾನಸಭಾ ಕ್ಷೇತ್ರಗಳ ಪ್ರಗತಿ, ಸದಸ್ಯತ್ವ ನೊಂದಣಿ ಅಭಿಯಾನದ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಕಲಬುರಗಿಯಿಂದ ಬೀದರ್ ಗೆ ಪ್ರಯಾಣ ಕೈಗೊಂಡು, ಅಂದು ಸಂಜೆ 4.30 ರಿಂದ ಸಂಜೆ 7ರವರೆಗೆ ಬೀದರ್‌ನಲ್ಲಿ ಬಸವಕಲ್ಯಾಣ, ಹುಮನಾಬಾದ್, ಬೀದರ್‌ ದಕ್ಷಿಣ, ಬೀದರ್, ಬಾಲ್ಕಿ, ಔರಾದ್ ವಿಧಾನಸಭಾ ಕ್ಷೇತ್ರಗಳ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ದಾರೆ. ಅಂದು ರಾತ್ರಿ ಕಲಬುರಗಿಗೆ ವಾಪಸಾಗಿ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ವಿವಿಧ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್ 23 ರಂದು ಬೆಳಗ್ಗೆ ಕಲಬುರಗಿಯಿಂದ ಯಾದಗಿರಿ ಜಿಲ್ಲೆಗೆ ತೆರಳುವ ಡಿ.ಕೆ. ಶಿವಕುಮಾರ್, ಜಿಲ್ಲೆಯ ಶೋರಾಪುರ, ಶಹಾಪುರ, ಯಾದಗಿರಿ, ಗುಮಿಟ್ಕಲ್ ವಿಧಾನಸಭಾ ಕ್ಷೇತ್ರಗಳ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ಕೈಗೊಳ್ಳಲಿದ್ದಾರೆ.

ಬಳಿಕ ಮಧ್ಯಾಹ್ನ ರಾಯಚೂರಿಗೆ ತೆರಳಿ ಸಂಜೆ 4 ಗಂಟೆಗೆ ರಾಯಚೂರಿನಲ್ಲಿ ರಾಯಚೂರು ಗ್ರಾಮೀಣ, ರಾಯಚೂರು, ಮಾನ್ವಿ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ಮಸ್ಕಿ ವಿಧಾನಸಭಾ ಕ್ಷೇತ್ರಗಳ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಿದ್ದಾರೆ. ಅಂದು ರಾತ್ರಿ ರಾಯಚೂರಿನಿಂದ ಹೈದರಾಬಾದ್​ಗೆ ತೆರಳಿ ಬೆಂಗಳೂರಿಗೆ ವಿಮಾನದ ಮೂಲಕ ಆಗಮಿಸಲಿದ್ದಾರೆ.

ಅಧಿವೇಶನ ಕಡೆಗಣನೆ : ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಕಾಂಗ್ರೆಸ್ ನ ಪ್ರಭಾವಿ ಶಾಸಕರಾಗಿರುವ ಡಿ ಕೆ ಶಿವಕುಮಾರ್ ಅಧಿವೇಶನದಲ್ಲಿ ಸರ್ಕಾರದ ವಿರುದ್ಧದ ಪಕ್ಷದ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕಿತ್ತು. ಆದರೆ 2023 ವಿಧಾನಸಭೆ ಚುನಾವಣೆಯನ್ನು ಅತ್ಯಂತ ಪ್ರಮುಖವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಪಕ್ಷ ಸಂಘಟನೆ ಹಾಗೂ ಸದಸ್ಯತ್ವ ನೋಂದಣಿಗೆ ಹೆಚ್ಚು ಒತ್ತು ನೀಡಲು ಸೂಚಿಸಿರುವ ಹಿನ್ನೆಲೆ ಅಧಿವೇಶನ ಸಂದರ್ಭದಲ್ಲಿಯೂ ಅನಿವಾರ್ಯವಾಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿರುವುದಾಗಿ ತಿಳಿದುಬಂದಿದೆ.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳಿರುವ ಶಿವಕುಮಾರ್ ನಾಳೆ ಒಂದು ದಿನ ಅಧಿವೇಶನದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಇದಾದ ಬಳಿಕ ಅವರು ಗುರುವಾರವೇ ವಿಧಾನಸಭೆ ಕಲಾಪದಲ್ಲಿ ಭಾಗಿಯಾಗಲಿದ್ದಾರೆ. ಒಂದು ತಿಂಗಳ ಬಜೆಟ್ ಅಧಿವೇಶನದಲ್ಲಿ ಎರಡು ವಾರ ಪೂರ್ಣಗೊಳಿಸಿದ್ದು, ಈ ತಿಂಗಳ ಕೊನೆಯವರೆಗೂ ಬಜೆಟ್ ಅಧಿವೇಶನ ನಡೆಯಲಿದೆ.

ಓದಿ : 'ಪತ್ನಿ ಮಾಂಸದ ಅಡುಗೆ ಮಾಡಿಲ್ಲ': 100 ನಂಬರ್​ಗೆ 6 ಬಾರಿ ಕರೆ ಮಾಡಿದ ವ್ಯಕ್ತಿ.. ಮುಂದೇನಾಯ್ತು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.