ಬೆಂಗಳೂರು: ಇಂದು ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪತ್ನಿಯೊಂದಿಗೆ ತೆರಳಿ ಮತ ಚಲಾಯಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಹಾಗೂ ಅವರ ಧರ್ಮಪತ್ನಿ ಉಷಾ ಇಂದು ಬೆಳಗ್ಗೆ ಕನಕಪುರದ ಸಾತನೂರಿನ ದೊಡ್ಡಾಲಹಳ್ಳಿಯಲ್ಲಿ ಮತದಾನ ಮಾಡಿದರು.

ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಬಿರುಸಿನಿಂದ ಸಾಗಿದ್ದು, 2ನೇ ಹಂತದ ಚುನಾವಣೆ ಡಿ.27ರಂ.ದು ನಡೆಯಲಿದೆ.