ETV Bharat / city

ಮೈಸೂರು ಸಕ್ಕರೆ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಿ: ಸಿಎಂಗೆ ಡಿಕೆಶಿ ಪತ್ರ - ಸಿಎಂ ಬಿಎಸ್​ವೈಗೆ ಡಿಕೆಶಿ ಪತ್ರ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಲು ಮನವಿ ಮಾಡಿದ್ದಾರೆ.

kpcc president dks letter to cm bsy
ಮೈಸೂರು ಸಕ್ಕರೆ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಿ: ಸಿಎಂಗೆ ಡಿಕೆಶಿ ಪತ್ರ
author img

By

Published : Jul 9, 2021, 7:12 PM IST

ಬೆಂಗಳೂರು: ಮೈಸೂರು ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆ ನೀಡುವುದನ್ನು ತಡೆಹಿಡಿದು, ಅದನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಿಎಂ ಯಡಿಯೂರಪ್ಪಗೆ ಮನವಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಮಾಜಿ ಶಾಸಕರು, ರೈತ ಮುಖಂಡರು ಈ ವಿಚಾರವಾಗಿ ತಮಗೆ ಮನವಿ ಪತ್ರ ಬರೆದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಈ ಮನವಿ ಮಾಡಿದ್ದಾರೆ.

ಸರ್ಕಾರ ಈಗಾಗಲೇ ಗುತ್ತಿಗೆ ನೀಡಿರುವ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳು ಸರಿಯಾಗಿ ಕಬ್ಬು ಅರೆಯುತ್ತಿಲ್ಲ. ಜತೆಗೆ ರೈತರ ಹಿತವನ್ನು ಕಾಪಾಡುತ್ತಿಲ್ಲ. ಈ ವಿಚಾರವಾಗಿ ತಾವುಗಳು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡುತ್ತಾ, ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗಳನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುವುದಾಗಿ ಹೇಳಿಕೆ ನೀಡಿದ್ದಿರಿ. ಹೀಗಾಗಿ ತಾವುಗಳು ತಮ್ಮ ಮಾತಿಗೆ ಬದ್ಧರಾಗಿ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳಬೇಕು ಎಂದು ಶಿವಕುಮಾರ್ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 10 ಜಿಲ್ಲೆಗಳಲ್ಲಿ ಕೋವಿಡ್‌ ಹೆಚ್ಚಾಗಿದೆ: ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.