ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಮಾರ್ಚ್ 21 ಹಾಗೂ 22ರಂದು ನಡೆಸಬೇಕಿದ್ದ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದ್ದು, ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಎಫ್ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣದಿಂದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಎಸ್ಡಿಎ ಪರೀಕ್ಷೆಗೆ ಕಾಲಾವಕಾಶ ಬೇಕಾಗಿರುವುದರಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ಕೆಪಿಎಸ್ಸಿ ಹೇಳಿದೆ
ಫೆಬ್ರವರಿ 14ರಂದು ಪರೀಕ್ಷೆ ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಫೆಬ್ರವರಿ 28ರಂದು ನಡೆದಿತ್ತು. ಕಾಲಾವಕಾಶದ ಕಾರಣದಿಂದ ಎಸ್ಡಿಎ ಪರೀಕ್ಷೆ ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸುವುದಾಗಿ ಕೆಪಿಎಸ್ಸಿ ಸ್ಪಷ್ಟಪಡಿಸಿದೆ.