ETV Bharat / city

ಸ್ವಾತಂತ್ರ್ಯ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಶಾಸಕ‌ ಅರವಿಂದ ಲಿಂಬಾವಳಿ

author img

By

Published : Aug 15, 2020, 3:55 PM IST

ಬೆಂಗಳೂರು ಪೂರ್ವ ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​​ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಲಾಯಿತು.

kr-puram-independence-day-celebration
ಸ್ವಾತಂತ್ರ್ಯ ದಿನಾಚರಣೆ

ಕೆಆರ್ ಪುರ: ದೇಶ, ರಾಜ್ಯವನ್ನು ಸಂರಕ್ಷಿಸುವಂತಹ ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

ಬೆಂಗಳೂರು ಪೂರ್ವ ತಾಲೂಕಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​​ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 74ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನ ಮಾಜಿ ಸಚಿವ ಹಾಗೂ ಶಾಸಕ ಅರವಿಂದ ಲಿಂಬಾವಳಿ ನೆರವೇರಿಸಿದರು.

74ನೇ ಸ್ವಾತಂತ್ರ್ಯ ದಿನಾಚರಣೆ

ಧ್ವಜಾರೋಹಣದ ನಂತರ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಕಾನೂನಿನಡಿ ಏಲ್ಲರೂ ಸಮಾನರು. ಸಮಾಜದಲ್ಲಿ ಶಾಂತಿ ಕದಡುವಂತಹ ಕೆಲಸ ಯಾರೂ ಮಾಡಬಾರದು. ಶಾಸಕರ ಮನೆಗೆ ಬೆಂಕಿ ಇಡುವಂತ ದುಸ್ಸಾಹಸ ಮಾಡಿರುವುದು ಖಂಡನಿಯ ಎಂದರು.

ಕೋವಿಡ್ ನಿಯಂತ್ರಣ ಮಾಡುವಲ್ಲಿ ನಮ್ಮ ಸರ್ಕಾರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಜನರು ಆತಂಕ ಪಡಬೇಕಿಲ್ಲ. ಕೊರೊನಾ ನಮಗೆ ಬಹಳ ಪಾಠ ಕಲಿಸಿದೆ. ನಮ್ಮ ಜೀವನದಲ್ಲಿ ಬದಲಾವಣೆ ತಂದಿದೆ. ಇದಕ್ಕೆ ಪೂರಕವಾಗಿ ಜನರ ನೆರವಿಗೆ ನಿಂತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿ ಮಾಡಿವೆ ಎಂದರು.

ಸ್ವಾತಂತ್ರ್ಯೋತ್ಸವದ ನಿಮಿತ್ತ ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರ ಬದಲಿಗೆ ಕೊರೊನಾ ವಾರಿಯರ್​ಗಳನ್ನು ಗೌರವಿಸಲಾಯಿತು. ಅಲ್ಲದೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.