ETV Bharat / city

ದೆಹಲಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ

ಸೆಪ್ಟೆಂಬರ್‌ ತಿಂಗಳಲ್ಲಿ ಪ್ರಥಮವಾಗಿ ಸಂಗೊಳ್ಳಿ ರಾಯಣ್ಣ ಮಿಲಿಟರಿ ಸ್ಕೂಲ್ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

basavaraj-bommai
ದೆಹಲಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ
author img

By

Published : Aug 15, 2022, 3:48 PM IST

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ದೆಹಲಿಯಲ್ಲಿ ಸ್ಥಾಪಿಸಲು ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ಮತ್ತು ಈ ಸಂಬಂಧ ಸಚಿವರ ಬಳಿ ಮಾತನಾಡಿ ಶೀಘ್ರ ಕ್ರಮಕ್ಕೆ ಕೇಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ವತಿಯಿಂದ ಖೋಡೆ ಸರ್ಕಲ್​ನಲ್ಲಿ ಆಯೋಜಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೇ ಜಯಂತ್ಯುತ್ಸವದ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಿಎಂ, ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆಗೆ ಯಾವುದಾದರೂ ಒಂದು ಜಾಗ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಈ ಬಗ್ಗೆ ಸಂಬಂಧಿಸಿದಂತೆ ಸಚಿವರ ಬಳಿ ಮಾತನಾಡಿ ಶೀಘ್ರ ರಾಯಣ್ಣ ಮೂರ್ತಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ರು.

ಸೆಪ್ಟೆಂಬರ್‌ ತಿಂಗಳಲ್ಲಿ ಪ್ರಥಮವಾಗಿ ಸಂಗೊಳ್ಳಿ ರಾಯಣ್ಣ ಮಿಲಿಟರಿ ಸ್ಕೂಲ್ ಆರಂಭಿಸಲಾಗುವುದು. ದೇಶಕ್ಕಾಗಿ ಏನಾದರೂ ಮಾಡಬೇಕು. ಜಾತಿ, ಮತ, ಪಂಥವನ್ನು ಲೆಕ್ಕಿಸದೆ ಸಂಕಲ್ಪ ಭಾವನೆಯಿಂದ ಯುವಕರು ದೇಶ ಕಟ್ಟಬೇಕು. ಮುಂದಿನ 25 ವರ್ಷಗಳಲ್ಲಿ ಭಾರತ ಜಗತ್ತಿಗೆ ನಂಬರ್ ಒನ್ ದೇಶವಾಗುತ್ತದೆ ಎಂದು ಸಿಎಂ ಭವಿಷ್ಯ ನುಡಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಶೇಷತೆ ಎಂದರೆ ಒಂದು ಸ್ವಾಮಿ ನಿಷ್ಠೆ, ಇನ್ನೊಂದು ವೀರತನ. ರಾಯಣ್ಣ ಮುಂದಿಟ್ಟ ಹೆಜ್ಜೆಯನ್ನು ಎಂದೂ ಹಿಂದೆ ಇಟ್ಟಿಲ್ಲ. ಶೂರತ್ವ, ಧೈರ್ಯಕ್ಕೆ ರಾಯಣ್ಣ ಹೆಸರುವಾಸಿ. ಕಿತ್ತೂರು ರಾಣಿ ಚೆನ್ನಮ್ಮ ಬಲಗೈ ಬಂಟನಾಗಿದ್ದ ಸಂಗೊಳ್ಳಿ ರಾಯಣ್ಣ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ದಿನೇಶ್ ಗುಂಡೂರಾವ್, ಮಾಜಿ ಸಚಿವ ಎಚ್ .ಎಂ. ರೇವಣ್ಣ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಮಾಜಿ ಮೇಯರ್​ಗಳಾದ ಹುಚ್ಚಪ್ಪ, ರಾಮಚಂದ್ರಪ್ಪ, ಬಿಬಿಎಂಪಿ ಮುಖ್ಯ ಆಡಳಿತ ಅಧಿಕಾರಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಇದನ್ನೂ ಓದಿ : ಮಾಣಿಕ್ ಷಾ ಮೈದಾನದಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನ; ಅಮೃತ ಘಳಿಗೆಗೆ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಮೆರಗು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.