ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಕರ್ನಾಟಕ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಪ್ಯಾಲೇಸ್ ರಸ್ತೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಲಕ್ಷ್ಮಿದೇವಿ (50) ಗುರುತಿಸಲಾಗಿದೆ. ಲಕ್ಷ್ಮಿದೇವಿ ಸಹೋದರನೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಪುಟ್ಟಪರ್ತಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇವರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ.
ಹೆಲ್ಮೆಟ್ ಧರಿಸಿದ್ದರೂ ಮಹಿಳೆಯ ತಲೆಯ ಮೇಲೆ ಬಸ್ಸಿನ ಚಕ್ರ ಹರಿದ ಪರಿಣಾಮ ಲಕ್ಷ್ಮೀದೇವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೇಲ್ನೋಟಕ್ಕೆ ಚಾಲಕನ ನಿರ್ಲಕ್ಷ್ಯತನವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಸದಾಶಿವನಗರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓದಿ : ಕಳ್ಳತನಕ್ಕೆಂದೇ ಯುಪಿಯಿಂದ ಬೆಂಗಳೂರಿಗೆ ಬಂದಿದ್ದ ಖದೀಮರು ಅಂದರ್