ಬೆಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಕೆಎಸ್‌ಆರ್‌ಟಿಸಿ ಬಸ್ ಮೈಸೂರು ರಸ್ತೆಯ ಮೆಟ್ರೋ ಪಿಲ್ಲರ್ಗೆ ಡಿಕ್ಕಿ ಹೊಡೆದಿರುವ ಘಟನೆ ತಡರಾತ್ರಿ ನಡೆದಿದೆ. ಮಡಿಕೇರಿಯಿಂದ ನಗರಕ್ಕೆ ಬರುವಾಗ ಮೈಸೂರು ರಸ್ತೆಯಲ್ಲಿರುವ ಭಾರತ್ ಪೆಟ್ರೋಲಿಯಂ ಬಳಿ ದುರ್ಘಟನೆ ಸಂಭವಿಸಿತು.

ಬಸ್ನಲ್ಲಿ 45 ಜನ ಪ್ರಯಾಣ ಮಾಡುತ್ತಿದ್ದರು. 25 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದರೆ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಬೈದಿದಕ್ಕೆ ಇಟ್ಟಿಗೆಯಿಂದ ಜಜ್ಜಿ ವ್ಯಕ್ತಿಯ ಕೊಲೆ