ETV Bharat / city

ಲ್ಯಾಪ್​ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್ಆರ್​ಟಿಸಿ ಸಿಬ್ಬಂದಿ - ಕೆಎಸ್ಆರ್​ಟಿಸಿ ಸಿಬ್ಬಂದಿ ಪ್ರಾಮಾಣಿಕತೆ

ಕೆಎಸ್ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಕರೊಬ್ಬರು 70 ಸಾವಿರ ರೂ. ಮೌಲ್ಯದ ಲ್ಯಾಪ್​ಟಾಪ್ ಇದ್ದ ಬ್ಯಾಗ್​ವೊಂದನ್ನು ಬಿಟ್ಟು ಹೋಗಿದ್ದು, ಕೆಎಸ್ಆರ್​ಟಿಸಿ ಸಿಬ್ಬಂದಿ ಬ್ಯಾಗ್​ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಪ್ರಾಮಾಣಿಕತೆ ಮೆರೆದ ಕೆಎಸ್ಆರ್​ಟಿಸಿ ಸಿಬ್ಬಂದಿ

author img

By

Published : Jan 18, 2021, 12:17 PM IST

ಬೆಂಗಳೂರು: 70 ಸಾವಿರ ರೂ. ಮೌಲ್ಯದ ಲ್ಯಾಪ್​ಟಾಪ್ ಇದ್ದ ಬ್ಯಾಗ್ ಅನ್ನು ಕೆಎಸ್ಆರ್​ಟಿಸಿ ಸಿಬ್ಬಂದಿ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ.

ಇದೇ ಜನವರಿ 16 ರಂದು ಸುಬ್ರಮಣ್ಯ ರೈಲ್ವೆ ನಿಲ್ದಾಣದಿಂದ ಧರ್ಮಸ್ಥಳಕ್ಕೆ ಕೆಎಸ್ಆರ್​ಟಿಸಿ ಬಸ್​ನಲ್ಲಿ ಪ್ರಯಾಣಿಕರೊಬ್ಬರು ಪ್ರಯಾಣಿಸಿದ್ದರು. ಈ ವೇಳೆ, ಬಸ್​ನಲ್ಲೇ ಲ್ಯಾಪ್​ಟಾಪ್ ಇದ್ದ ಬ್ಯಾಗ್​ ಅನ್ನು ಮರೆತು ಬಿಟ್ಟು ಹೋಗಿದ್ದರು. ಬ್ಯಾಗ್​ ನೋಡಿದ ಬಸ್​ ಚಾಲಕ ಇಸುಬ್ ಅಲಿ ಕಲ್ಲೂರ್ ಹಾಗೂ ನಿರ್ವಾಹಕ ಮಂಜು ಪ್ರಯಾಣಿಕರನ್ನು ಪತ್ತೆ ಹಚ್ಚಿ, ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಬ್ಯಾಗ್ ಅನ್ನು ಹಿಂತಿರುಗಿಸಿದ್ದಾರೆ.

ಇನ್ನು ಕೆಎಸ್ಆರ್​ಟಿಸಿ ಸಿಬ್ಬಂದಿ ಪ್ರಾಮಾಣಿಕತೆಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.