ಬೆಂಗಳೂರು: ನಾಳಿನ ಭಾರತ ಬಂದ್ಗೆ ನಮ್ಮ ಬೆಂಬಲ ಇಲ್ಲ ಎಂದು ರೈತ ಮುಖಂಡ ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಂತಕುಮಾರ್, ಬಂದ್ ಬದಲು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದೇವೆ. ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ನಾಳೆ ಶವಯಾತ್ರೆ ಮಾಡಲಾಗುವುದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಂಯುಕ್ತ ಕಿಸಾನ್ ಮೊರ್ಚಾ ಪ್ರತಿಭಟನೆಗೆ ನನ್ನ ಬೆಂಬಲವಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಮತ್ತೊಂದು ವಿಡಿಯೋ ಹರಿಬಿಟ್ಟ ಸಿಡಿ ಲೇಡಿ: ಪೋಷಕರಿಗೆ ರಕ್ಷಣೆ ಕೊಡಲು ಕೈ ನಾಯಕರಿಗೆ ಮನವಿ
ಹಲವಾರು ತಿಂಗಳಿಂದ ರಾಜ್ಯದಲ್ಲಿ ಮೂರ್ನಾಲ್ಕು ಬಂದ್ ಆಗಿವೆ. ನಾಳಿನ ಬಂದ್ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ನಮ್ಮ ಎಲ್ಲ ರೈತ ಸಂಘಟನೆಗಳು ಯೋಜನೆ ರೂಪಿಸಿಲ್ಲ. ಹೀಗಾಗಿ ಬಂದ್ ಬದಲಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ರಾಜ್ಯದಲ್ಲಿ ಎಲ್ಲರೂ ಬೆಂಬಲ ಸೂಚಿಸಬೇಕೆಂದು ಮನವಿ ಮಾಡಿದರು.