ETV Bharat / city

ಟೊಯೊಟಾ ಕಾರ್ಮಿಕರು-ಆಡಳಿತ ಮಂಡಳಿ ನಡುವಿನ ಬಿಕ್ಕಟ್ಟು: ಸಿಎಂ ಜೊತೆ ಮತ್ತೆ ಚರ್ಚೆ ಎಂದ ಹೆಬ್ಬಾರ್​

author img

By

Published : Feb 2, 2021, 6:05 PM IST

ಬಿಡದಿ ಬಳಿಯ ಟೊಯೊಟಾ ಕಿರ್ಲೋಸ್ಕರ್ ಕೈಗಾರಿಕೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯವರ ಜೊತೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿಯವರೊಂದಿಗೆ ಮತ್ತೊಮ್ಮೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಶಿವರಾಮ್ ಹೆಬ್ಬಾರ್​ ತಿಳಿಸಿದ್ದಾರೆ.

labor-minister-shivaram-hebbar-reaction-about-toyota-kirloskar-worker-problem
ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರು-ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟು: ಸಿಎಂ ಜೊತೆ ಮತ್ತೆ ಚರ್ಚೆ ಎಂದ ಹೆಬ್ಬಾರ್

ಬೆಂಗಳೂರು: ಬಿಡದಿ ಬಳಿಯ ಟೊಯೊಟಾ ಕಿರ್ಲೋಸ್ಕರ್ ಕೈಗಾರಿಕೆಯ ಕಾರ್ಮಿಕರು ಮತ್ತು ಆಡಳಿತ ಮಂಡಳಿಯ ನಡುವಿನ ಬಿಕ್ಕಟ್ಟನ್ನು ಮುಖ್ಯಮಂತ್ರಿಯವರೊಂದಿಗೆ ಮತ್ತೊಮ್ಮೆ ಚರ್ಚೆ ಮಾಡಿ ಬಗೆಹರಿಸುವ ಪ್ರಯತ್ನ ಮಾಡುವುದಾಗಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಶೂನ್ಯ ವೇಳೆ ಬಿಜೆಪಿ ಶಾಸಕ ಕರುಣಾಕರ ರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರ ನೀಡಿದ ಹೆಬ್ಬಾರ್, ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಕಾರ್ಮಿಕರ ಧರಣಿ 85ನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಮಿಕ ಇಲಾಖೆಯು ಸಭೆ ನಡೆಸಿದೆ. ಸಭೆಗೆ ಕಾರ್ಮಿಕ ಸಂಘಟನೆಯ ಅಧ್ಯಕ್ಷರು ಬರುತ್ತಿಲ್ಲ. 64 ಮಂದಿ ಕಾರ್ಮಿಕರ ವಿರುದ್ಧ ವಿಚಾರಣೆ ನಡೆಯುತ್ತಿದೆ. 1896 ಕಾರ್ಮಿಕರು ಕೆಲಸಕ್ಕೆ ಹಾಜರಾಗಿದ್ದಾರೆ. ಇದರ ಜೊತೆಗೆ ಹೊಸದಾಗಿ 181 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸರ್ಕಾರ ಕಾರ್ಮಿಕರ ಪರವಾಗಿದೆ. ವಿಚಾರಣೆ ಎದುರಿಸುತ್ತಿರುವ 64 ಮಂದಿಯನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕೆಂಬ ಬೇಡಿಕೆಯಿಂದಾಗಿ ಬಿಕ್ಕಟ್ಟು ಮುಂದುವರೆದಿದೆ. ಸರ್ಕಾರ ಈ ವಿಚಾರದಲ್ಲಿ ಪ್ರತಿಷ್ಠೆ ಮಾಡುವುದಿಲ್ಲ. ಕಾರ್ಖಾನೆ ಮತ್ತು ಕಾರ್ಮಿಕರನ್ನು ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡಲಿದೆ. ನಾಳೆಯೇ ಟೊಯೊಟಾ ಕಾರ್ಖಾನೆಗೆ ಭೇಟಿ ಕೊಡಲಾಗುವುದು. ಕಾರ್ಮಿಕರು ಕಾರ್ಖಾನೆಯನ್ನು ಬಂದ್ ಮಾಡುವುದು ಸರಿಯಲ್ಲ. ಹಠ ಬಿಡಬೇಕು ಎಂದರು.

ಈ ಹಂತದಲ್ಲಿ ಮಧ್ಯಪ್ರವೇಶಿಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಟೊಯೊಟಾ ಕಾರ್ಖಾನೆಯಲ್ಲಿ 66 ಕಾರ್ಮಿಕರನ್ನು ಅಮಾನತು ಮಾಡಿ, 8 ಕಾರ್ಮಿಕರನ್ನು ವಜಾಗೊಳಿಸಲಾಗಿದೆ ಎಂದು ಹೇಳಾಗುತ್ತಿದೆ. ಇದು ಜಪಾನ್ ಮೂಲದ ಕಾರ್ಖಾನೆಯಾಗಿದ್ದು, ಅಲ್ಲಿನ ಕಾನೂನುಗಳನ್ನು ಇಲ್ಲೂ ಜಾರಿ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ. ಕಾನೂನು ಪ್ರಕಾರ ತೀರ್ಮಾನ ಮಾಡಿ ಮಾನವೀಯತೆ ದೃಷ್ಟಿಯಿಂದ ಬಿಕ್ಕಟ್ಟನ್ನು ಬಗೆಹರಿಸಿ. ಬಗ್ಗದಿದ್ದರೆ ಕಾರ್ಖಾನೆಯವರಿಗೆ ಮುಖ್ಯಮಂತ್ರಿಗಳಿಂದ ಸೂಚನೆ ಕೊಡಿಸಿ. ಸೌಹಾರ್ದಯುತ ವಾತಾವರಣ ನಿರ್ಮಿಸಿ ಎಂದು ಸಲಹೆ ಮಾಡಿದರು.

ಈ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದ ಕಾರ್ಮಿಕ ಸಚಿವರು, ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ. ಕೋವಿಡ್ ಸಂದರ್ಭದಲ್ಲಿ 4 ತಿಂಗಳ ವೇತನವನ್ನು ಕಾರ್ಮಿಕರಿಗೆ ನೀಡಲಾಗಿದೆ ಎಂದರು.

ಇದಕ್ಕೂ ಮುನ್ನ ಶಾಸಕ ಕರುಣಾಕರ ರೆಡ್ಡಿ ಮಾತನಾಡಿ, ಕಳೆದ 3 ತಿಂಗಳಿಂದ ಟೊಯೊಟಾ ಕಾರ್ಖಾನೆಯ ಕಾರ್ಮಿಕರು ಧರಣಿ ಮಾಡುತ್ತಿದ್ದರು. ಮೂರು ನಿಮಿಷದಲ್ಲಿ ಮಾಡುವ ಕೆಲಸವನ್ನು ಎರಡೂವರೆ ನಿಮಿಷದಲ್ಲಿ ಮಾಡಬೇಕೆಂಬ ಒತ್ತಡ ಹಾಕಲಾಗುತ್ತಿದೆ ಎಂದು ಕಾರ್ಮಿಕರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕೆಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.