ಬೆಂಗಳೂರು: ನಗರದ ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇನ್ನು ಮುಂದೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ( ಎನ್ಜಿಟಿ) ರೂಪಿಸಿರುವ ಮೇಲ್ವಿಚಾರಣಾ ಸಮಿತಿಯೇ ಮುಂದುವರಿಸಲಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಎನ್ಜಿಟಿ ರಚಿಸಿದ್ದ ಮೇಲ್ವಿಚಾರಣಾ ಸಮಿತಿಯ ಅವಧಿ ಕಳೆದ ಮಾರ್ಚ್ 31ಕ್ಕೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ವರ್ತೂರು ಹಾಗೂ ಬೆಳ್ಳಂದೂರು ಕೆರೆಗಳ ಮಾಲಿನ್ಯಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿತ್ತು.
ಇಂದು ಕೆರೆಗಳ ಮಾಲಿನ್ಯ ತಡೆಗಟ್ಟಲು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ವೇಳೆ, ಬಿಡಿಎ ಪರ ವಕೀಲರು, ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿ, ಸಮಿತಿಯ ಕಾರ್ಯಾವಧಿಯನ್ನು 2021ರ ಜುಲೈ 31ರ ವರೆಗೆ ವಿಸ್ತರಿಸಿ ಎನ್ ಜಿ ಟಿ ಆದೇಶಿಸಿದೆ ಎಂದರು. ಇದನ್ನು ಪರಿಗಣಿಸಿದ ಪೀಠ ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಸಮಿತಿಯೇ ವಿಚಾರಣೆ ನಡೆಸಿ ವರದಿ ಸಲ್ಲಿಸಲಿ. ವೃಷಭಾವತಿ ನದಿಗೆ ಸಂಬಂಧಿಸಿದ ಪ್ರಕರಣವನ್ನು ಹೈಕೋರ್ಟ್ ವಿಚಾರಣೆ ನಡೆಸಲಿದೆ ಎಂದು ಸೂಚಿಸಿತು.
ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳ ಮೇಲ್ವಿಚಾರಣೆಗಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ನೇತೃತ್ವದಲ್ಲಿ ಎನ್ ಜಿ ಟಿ ಮೇಲ್ವಿಚಾರಣಾ ಸಮಿತಿ ರಚಿಸಿದೆ.
ಬೆಂಗಳೂರಿನ ಕೆರೆಗಳ ಪ್ರಕರಣಗಳು ಮತ್ತೆ ಎನ್ಜಿಟಿ ಮೇಲ್ವಿಚಾರಣಾ ಸಮಿತಿ ವ್ಯಾಪ್ತಿಗೆ