ಬೆಂಗಳೂರು : ಲಕ್ಕಸಂದ್ರದ 7ನೇ ಮುಖ್ಯರಸ್ತೆಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದ ಸಂಬಂಧ ನಗರದ ಆಡುಗೋಡಿ ಪೊಲೀಸರು ಕಟ್ಟಡದ ಮಾಲೀಕ ಸುರೇಶ್ ಎಂಬಾತನನ್ನು ಬಂಧಿಸಿದ್ದಾರೆ.
ಸುಮಾರು 70 ವರ್ಷದ ಕಟ್ಟಡ ಶಿಥಿಲವಾಗಿದ್ದರೂ ಮೆಟ್ರೋ ಕಾರ್ಮಿಕರಿಗೆ ಬಾಡಿಗೆಗೆ ನೀಡಿದ್ದರು. ಶಿಥಿಲವಾಗಿದ್ದ ಕಟ್ಟಡ ತೆರವು ಮಾಡದೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಆಡುಗೋಡಿ ಠಾಣೆಗೆ ಬಿಬಿಎಂಪಿ ಅಧಿಕಾರಿಗಳು ದೂರು ನೀಡಿದ್ದರು.
ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಸೋಮವಾರ ಕಟ್ಟಡ ಕುಸಿತದ ಸುದ್ದಿ ತಿಳಿದು ಮಾಲೀಕ ಸುರೇಶ್ ತಲೆಮರೆಸಿಕೊಂಡಿದ್ದ. ತನಿಖೆ ಮುಂದುವರಿಸಿದ ಪೊಲೀಸರು ಕಟ್ಟಡ ಮಾಲೀಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಕಟ್ಟಡ ಕುಸಿತ ಪ್ರಕರಣ : ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಿದ ಖಾಕಿ