ಬೆಂಗಳೂರು: ಲ್ಯಾಪ್ ಟಾಪ್ ಕಂಪನಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡ್ತಿದ್ದ ವ್ಯಕ್ತಿಯೋರ್ವನನ್ನ ಬಂಧನ ಮಾಡುವಲ್ಲಿ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ 6.25 ಲಕ್ಷ ರೂ. ಮೌಲ್ಯದ 25 ಲ್ಯಾಪ್ಟಾಪ್ಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.
ಲಗ್ಗರೆಯಲ್ಲಿ ವಾಸವಾಗಿದ್ದ ಮಹಾರಾಷ್ಟ್ರ ಮೂಲದ ಸುಮೀತ್ ಸಿಂಗ್(30) ಬಂಧಿತ ಆರೋಪಿಯಾಗಿದ್ದಾನೆ. ಅಂಗಡಿ ಹಾಗೂ ಗೋದಾಮುಗಳಲ್ಲಿ ಇದ್ದ ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಆರೋಪ ಈತನ ಮೇಲಿದೆ.
ಕಂಪನಿಯಲ್ಲಿನ ಸಿಸಿಟಿವಿ ವಿಕ್ಷಣೆ ಮಾಡಿದಾಗ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸಮೀತ್ ಲ್ಯಾಪ್ ಟಾಪ್ ಕಳ್ಳತನ ಮಾಡಿಕೊಂಡು ಹೋಗುತ್ತಿರುವುದು ಕಂಡು ಬಂದಿದೆ.
ಕಂಪನಿಯಲ್ಲಿ ಲ್ಯಾಪ್ಟಾಪ್ ಕಳ್ಳತನವಾಗಿರುವ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.ಇನ್ಸ್ಪೆಕ್ಟರ್ ಪ್ರಶಾಂತ್ ಹಾಗೂ ಸಿಬ್ಬಂದಿ ಆರೋಪಿಯ ಮಾಹಿತಿ ಕಲೆ ಹಾಕಿ ಬಂಧಿಸಿ, ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.
ಇದನ್ನೂ ಓದಿರಿ: ಬೆಳಗಾವಿ: ಅಧಿವೇಶನದ ಡ್ಯೂಟಿಗೆ ಬಂದ ವಾಹನಗಳ ಮೇಲೆ ಕಲ್ಲು ತೂರಾಟ.. ಪೊಲೀಸರಿಂದ ಲಾಠಿ ಚಾರ್ಜ್
ಆರೋಪಿ ಕಂಪನಿಯಲ್ಲಿ ದಿನಗೂಲಿ ನೌಕರನಾಗಿ ಕೆಲಸ ಮಾಡಿಕೊಂಡಿದ್ದು, ಕಳೆದ ಮೂರು ತಿಂಗಳಿಂದ ಮಾಲೀಕರಿಗೆ ಗೊತ್ತಾಗದಂತೆ ಲ್ಯಾಪ್ಟಾಪ್ ಕಳತನ ಮಾಡಿ, ಸ್ನೇಹಿತರಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಿದ್ದಾನೆ. ಹಲವು ಲ್ಯಾಪ್ಟಾಪ್ ಆತನ ರೂಮ್ನಲ್ಲೇ ಇಟ್ಟುಕೊಂಡಿದ್ದನು ಎಂದು ಹೇಳಿದ್ದಾರೆ. ಆರೋಪಿ ನೀಡಿದ ಮಾಹಿತಿ ಮೇರೆಗೆ 6.25 ಲಕ್ಷ ರೂ ಬೆಲೆಯ 25 ಲ್ಯಾಪ್ಟಾಪ್ ವಶಪಡಿಸಿಕೊಳ್ಳುವಲ್ಲಿ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.