ಬೆಂಗಳೂರು: ಕನ್ನಡ ಚಿತ್ರರಂಗದ ಪೀತಿಯ 'ಅಪ್ಪು' ಪುನೀತ್ ರಾಜ್ಕುಮಾರ್ ಅಂತ್ಯಕ್ರಿಯೆ ಶಾಸ್ತ್ರೋಕ್ತವಾಗಿ, ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ.
ನಟ ರವಿಚಂದ್ರನ್, ರಾಕಿಂಗ್ ಸ್ಟಾರ್ ಯಶ್, ನಟ ರಿಷಭ್ ಶೆಟ್ಟಿ, ಟೆನಿಸ್ ಕೃಷ್ಣ, ನಟಿ, ಸೃಜನ್ ಲೋಕೇಶ್, ಸಂಸದೆ ಸುಮಲತಾ, ಯೋಗಿ ಸೇರಿದಂತೆ ಅನೇಕರು ಸ್ಥಳದಲ್ಲಿ ಉಪಸ್ಥಿತರಿದ್ದಾರೆ.
ಈ ವೇಳೆ ಮಾಜಿ ಸಿಎಂ ಬಿಎಸ್ವೈ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಪುನೀತ್ ಅಂತ್ಯಕ್ರಿಯೆಗೂ ಮುನ್ನ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು.