ಬೆಂಗಳೂರು: ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನ ಕರೆಯೋ ಬಗ್ಗೆ ನಿರ್ಧಾರ ಆದರೆ, ಗೋಹತ್ಯೆ ನಿಷೇಧ ಕಾಯಿದೆ ಕುರಿತು ಸುಗ್ರೀವಾಜ್ಞೆ ಹೊರಡಿಸುವ ಅವಶ್ಯಕತೆಯಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿ ವಿಚಾರವಾಗಿ ಮಾತನಾಡಿದ ಅವರು, ಒಂದು ವೇಳೆ ಅಧಿವೇಶನ ಕರೆಯೋ ಬಗ್ಗೆ ನಿರ್ಧಾರ ಆಗಿಲ್ಲ ಅಂದರೆ, ಗೋಹತ್ಯೆ ನಿಷೇಧ ಕಾಯಿದೆಗೆ ಸುಗ್ರೀವಾಜ್ಞೆ ಹೊರಡಿಸುವ ತೀರ್ಮಾನ ಮಾಡುತ್ತೇವೆ. ಅಧಿವೇಶನ ಕರೆದರೆ ಮೇಲ್ಮನೆಯಲ್ಲಿ ಕಾಯಿದೆ ಕುರಿತು ಚರ್ಚೆ ಆಗಬೇಕು ಎಂದರು.
ಓದಿ: ಜನವರಿ 1 ರಿಂದ ಶಾಲೆ ಆರಂಭ ನಿರ್ಧಾರದಲ್ಲಿ ಬದಲಾವಣೆ ಇಲ್ಲ: ಸಿಎಂ
ಇನ್ನು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಪಕ್ಷದ ಚಿಹ್ನೆಯಲ್ಲಿ ಸ್ಪರ್ಧೆ ಇಲ್ಲವಾಗಿರುವುದರಿಂದ ಬಹುತೇಕ ಸೀಟನ್ನು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆಲ್ಲುವ ವಿಶ್ವಾಸ ಇದೆ ಎಂದು ತಿಳಿಸಿದರು.