ETV Bharat / city

ಬಾಸಿಸಂ ಬಿಟ್ಟು ಜನರ ಕೆಲಸ ಮಾಡಿ: ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಪಾಠ ಹೀಗಿತ್ತು.. - ಜನಗಳ ಕೆಲಸ ಮಾಡಲು ಜಿಲ್ಲಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ

ಬೆಳೆಗಳ ಹಾನಿ, ಮನೆ ಹಾನಿಗೆ ಪರಿಹಾರ ಕೊಡದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ, ಕೆಲಸ ಆಗಿಲ್ಲ ಅಂತ ಕೆಳಗಿನ ಅಧಿಕಾರಿಗಳ ಮೇಲೆ ಆಪಾದನೆ ಮಾಡಬೇಡಿ. ಕೆಲಸಗಳು ಆಗದಿರುವುದಕ್ಕೆ ನೀವೇ ಹೊಣೆ, ನಿಮ್ಮದೇ ಹೊಣೆಗಾರಿಕೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

bommai
ಸಿಎಂ ಬೊಮ್ಮಾಯಿ ಪಾಠ
author img

By

Published : Dec 31, 2021, 12:50 PM IST

ಬೆಂಗಳೂರು: ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಬೊಮ್ಮಾಯಿ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಜೊತೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳು, ಒಮಿಕ್ರಾನ್ ತಡೆಗೆ ಪೂರ್ವಸಿದ್ಧತೆ, ರೈತ ವಿದ್ಯಾ‌‌ ಸಿರಿ ಯೋಜನೆ, ವಿಶೇಷಚೇತನರ ಮಾಸಾಶನ‌ ಯೋಜನೆ, ನೆರೆ ಪರಿಹಾರ ವಿತರಣೆ, ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುತ್ತಿರುವ ಸಿಎಂ, ನೀವು ಜನರ ಸೇವೆ ಮಾಡುವ ಸಾರ್ವಜನಿಕ ಸೇವಾಧಿಕಾರಿಗಳು. ಬಾಸಿಸಂ (Bossism) ಬಿಟ್ಟು ಜನರ ಕೆಲಸ ಮಾಡಿ ಎಂದು ತಾಕೀತು ಮಾಡಿದರು.

ನೀವು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೌದು. ಆದರೆ, ಫೀಲ್ಡಿನಲ್ಲೂ ಅದೇ ರೀತಿ ಕೆಲಸ ಮಾಡಬೇಡಿ. ಜನರ ನಡುವೆ ಹೋಗಿ ಜನರ ಜೊತೆ ಕೆಲಸ ಮಾಡಿ. ಕೆಳಹಂತದ ಅಧಿಕಾರಿಗಳು ನಿಮ್ಮಂತೆಯೇ ವರ್ತಿಸಲು ಅವಕಾಶ ಕೊಡಬೇಡಿ. ನಿಮ್ಮ‌ ಸ್ವಂತಿಕೆ, ವಿವೇಚನೆ ಬಳಸಿ ಕೆಲಸ ಮಾಡಿ. ಅಧಿಕಾರ ನಿಮ್ಮಲ್ಲಿ ಇನ್ನಷ್ಟು ಮೃದುತ್ವ, ವಿನಯತೆ ತರಬೇಕು. ಹಾಗಾಗಿ, ಎಚ್ಚರಿಕೆಯಿಂದ ಆಡಳಿತ ಕೆಲಸ ಮಾಡಿ ಎಂದು ಸಲಹೆ ನೀಡಿದರು.

ಬೆಳೆಗಳ ಹಾನಿ, ಮನೆ ಹಾನಿಗೆ ಪರಿಹಾರ ಕೊಡದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಸಿಎಂ, ಕೆಲಸ ಆಗಿಲ್ಲ ಅಂತ ಕೆಳಗಿನ ಅಧಿಕಾರಿಗಳ ಮೇಲೆ ಆಪಾದನೆ ಮಾಡಬೇಡಿ. ಕೆಲಸಗಳು ಆಗದಿರುವುದಕ್ಕೆ ನೀವೇ ಹೊಣೆ, ನಿಮ್ಮದೇ ಹೊಣೆಗಾರಿಕೆ. ಸರ್ಕಾರದ ಸೇವೆಗಳು, ಪರಿಹಾರಗಳು ಜನರಿಗೆ ಯಾವುದೇ ವಿಳಂಬ ಆಗದಂತೆ ತಲುಪಬೇಕು ಎಂದು ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: ಡಿಕೆಶಿಗೆ ಬೆಕ್ಕಿನ ಕನಸಲ್ಲಿ ಇಲಿ ಎಂಬಂತಾಗಿದೆ: ಸಿಎಂ ತಿರುಗೇಟು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.