ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕಾದ ಸಂಬಂಧ ಸಕ್ಷಮ ಪ್ರಾಧಿಕಾರದ ವಿಶೇಷ ಅಧಿಕಾರಿ ಹರ್ಷಗುಪ್ತಾ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮಾಹಿತಿ ಕೋರಿ ಪತ್ರ ಬರೆದಿದ್ದಾರೆ.
ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗಳ ಠೇವಣಿದಾರರ ಹಿತರಕ್ಷಣಾ ಕಾಯ್ದೆ (ಕೆಪಿಐಡಿ)-2004 ಪ್ರಕಾರ 1 ರಿಂದ 23 ಆರೋಪಿಗಳ ಆಸ್ತಿ ಮಧ್ಯಂತರ ಜಪ್ತಿ ಮಾಡಲಾಗಿದೆ. ಆರೋಪಿ ನಂ.24ರಿಂದ 28ರ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡಿಲ್ಲ. ಹೀಗಾಗಿ, ಸರ್ಕಾರ ಸಿಬಿಐನಿಂದ ಅಗತ್ಯ ವರದಿ ಪಡೆಯಬೇಕು. ಜಪ್ತಿ ಮಾಡಿಕೊಳ್ಳಬೇಕಾದ ಆಸ್ತಿಗಳ ಬಗ್ಗೆ ವರದಿ ನೀಡುವಂತೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ.
ಇದನ್ನೂ ಓದಿ...5 ದಿನವಾದ್ರೂ ಪತ್ತೆಯಾಗದ ಚಿಕ್ಕಜಾಲ ಇನ್ಸ್ಪೆಕ್ಟರ್ : ಡಿಜಿ, ಐಜಿಪಿಗೆ ವರದಿ ಸಲ್ಲಿಸಲು ಮುಂದಾದ ಎಸಿಬಿ
ಪ್ರಮುಖ ಆರೋಪಿ ಮೊಹಮ್ಮದ್ ಮನ್ಸೂರ್ ಖಾನ್ ಸೇರಿದಂತೆ ಬಹುತೇಕರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಆರೋಪಿತ ಸ್ಥಾನದಲ್ಲಿರುವ ಪೊಲೀಸ್ ಅಧಿಕಾರಿಗಳಾದ ಸಿಐಡಿ ಡಿವೈಎಸ್ಪಿ ಶ್ರೀಧರ್, ಐಪಿಎಸ್ ಅಧಿಕಾರಿ ಹೇಮಂತ್ ಎಂ ನಿಂಬಾಳ್ಕರ್, ಅಜಯ್ ಹಿಲೋರಿ, ಇನ್ಸ್ ಪೆಕ್ಟರ್ ರಮೇಶ್, ಸಬ್ ಇನ್ಸ್ ಪೆಕ್ಟರ್ ಗೌರಿಶಂಕರ್ನ ಆಸ್ತಿಗಳ ಮಾಹಿತಿ ಪಡೆಯುವಂತೆ ಕೋರಿ ಪತ್ರ ಬರೆಯಲಾಗಿದೆ.