ಬೆಂಗಳೂರು: ಕೋವಿಡ್ ಕಾರಣದಿಂದ ಮುಚ್ಚಲಾಗಿದ್ದ ಸಾರ್ವಜನಿಕ ಗ್ರಂಥಾಲಯ ತೆರೆಯುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ 30 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಅನ್‌ಲಾಕ್ ಮಾಡಲಾಗಿದ್ದು, ಉಳಿದ 13 ಜಿಲ್ಲೆಗಳಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಸಾರ್ವಜನಿಕ ಗ್ರಂಥಾಲಯ ಸೇವೆಗಳನ್ನು ಒದಗಿಸುವಂತೆ ಸಾರ್ವಜನಿಕರಿಂದ ಮನವಿಗಳು ಬಂದ ಹಿನ್ನೆಲೆಯಲ್ಲಿ ಅನ್‌ಲಾಕ್ ಆಗಿರುವ 17 ಜಿಲ್ಲೆಗಳಲ್ಲಿ ಓದುಗರಿಗೆ ಗ್ರಂಥಾಲಯ ಸೇವೆ ಪುನಃ ಒದಗಿಸಲು ಗ್ರಂಥಾಲಯ ಇಲಾಖೆಗೆ ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ನಿಯಮಗಳಾದ ಮಾಸ್ ಧರಿಸುವುದು, ಸ್ವಚ್ಛತೆ ಕಾಪಾಡುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸರ್ಕಾರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ.
ಜೂನ್ 28ರ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 05.30 ರವರೆಗೆ ಗ್ರಂಥಾಲಯಗಳು ಸಾರ್ವಜನಿಕರಿಗೆ ಸೇವೆ ಒದಗಿಸಲಿವೆ. ಉಳಿದ ಜಿಲ್ಲೆಗಳಲ್ಲಿ ಮುಂದಿನ ಸರ್ಕಾರದ ನಿರ್ಧಾರ ಹಾಗೂ ಜಿಲ್ಲಾಧಿಕಾರಿಗಳು ಕೋವಿಡ್ ಸ್ಥಿತಿಗತಿ ಹಾಗೂ ನಿಯಮಾವಳಿಗಳನುಸಾರ ನಿರ್ಧಾರ ಕೈಗೊಳ್ಳಲು ಅದೇಶದಲ್ಲಿ ಸೂಚಿಸಲಾಗಿದೆ.
ಸೋಮವಾರದಿಂದ ರಾಜ್ಯದ 17 ಜಿಲ್ಲೆಗಳಲ್ಲಿ ಗ್ರಂಥಾಲಯಗಳು ರಿಓಪನ್ - ಬೆಂಗಳೂರು
ಅನ್‌ಲಾಕ್ ಆಗಿರುವ 17 ಜಿಲ್ಲೆಗಳಲ್ಲಿ ಓದುಗರಿಗೆ ಗ್ರಂಥಾಲಯ ಸೇವೆ ಪುನಃ ಒದಗಿಸಲು ಗ್ರಂಥಾಲಯ ಇಲಾಖೆಗೆ ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.