ETV Bharat / city

ಹಿಂದುಳಿದ ವರ್ಗಗಳಿಗೆ ಮೀಸಲು ಕಲ್ಪಿಸಿದ ನಂತರ ಚುನಾವಣೆ: ಸಿಎಂ ಬೊಮ್ಮಾಯಿ - political reservation for backward classes

ಬುಧವಾರದಂದು ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಭೆ ನಡೆದಿದೆ.

local body elections after provide reservation for backward classes
ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಭೆ
author img

By

Published : Mar 24, 2022, 7:36 AM IST

ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ಒಮ್ಮತದ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬುಧವಾರದಂದು ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಭೆ ನಡೆದಿದ್ದು, ನಂತರ ಸಿಎಂ ಬೊಮ್ಮಾಯಿ ಮಾಧ್ಯಮಗಳಿಗೆ ಮಾಹಿತಿ ನೀಡಿದದರು.

ಎಲ್ಲ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಲ್ಲಿ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ.50 ಅನ್ನು ಮೀರಬಾರದು ಎನ್ನುವ ಸರ್ವೋಚ್ಛ ನ್ಯಾಯಾಲಯದ ಷರತ್ತುಗಳನ್ವಯ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

local body elections after provide reservation for backward classes
ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಸಭೆ

ಇತ್ತೀಚಿನ ಸರ್ವೋಚ್ಛ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎಂಬ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ ಎಂದು ಹೇಳಿದರು.

ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೇ ಅಥವಾ ಸರ್ವೋಚ್ಛ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೇ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. ಶೇ.7.5ಕ್ಕೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯದವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್.ಸಿ ಮತ್ತು ಎಸ್.ಟಿ ಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ ಹಾಗೂ ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯವನ್ನು ಕೊಡಬೇಕೆಂಬ ತೀರ್ಮಾನವಾಗಿದೆ ಎಂದರು.

ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಛ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಬಜೆಟ್​ನಲ್ಲಿ ಘೋಷಣೆಯಾದ 20 ದಿನಗಳಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಆದೇಶ

2ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಕೆಲವರು 3ಬಿ ನಲ್ಲಿರುವವರು 2ಎ ವರ್ಗಕ್ಕೆ ಸೇರಬೇಕು, 3 ಬಿನಲ್ಲಿ ಇಲ್ಲದವರು, 3ಬಿ ವರ್ಗಕ್ಕೆ ಸೇರಬೇಕು ಎಂಬ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಾವು ಮುಂದುವರೆಯಬೇಕು. ಮೂಲಭೂತವಾಗಿ ಮೀಸಲಾತಿ ಶೇ.50 ದಾಟಬೇಕೋ, ದಾಟಿದರೆ ಕಾನೂನಿನ ಕ್ರಮವಾಗಿ ಏನು ಮಾಡಬೇಕು ಎನ್ನುವ ವಿಚಾರವಿದೆ.

ಮೊದಲು ನಾಗಮೋಹನ್ ದಾಸ್​ ವರದಿ ಆಧಾರದ ಮೇಲೆ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಆದಷ್ಟು ಶೀಘ್ರವಾಗಿ ನ್ಯಾಯಮೂರ್ತಿ ಸುಭಾಷ್ ಅಡಿ ಅವರ ವರದಿಯನ್ನು ಪಡೆದು, ನಂತರ ಸರ್ವಪಕ್ಷ ಸಭೆಯ ಮುಂದಿಡಲಾಗುವುದು. ನಂತರ ವಿಧಾನಸಭೆಯಲ್ಲಿ ಮಂಡಿಸಿ ನ್ಯಾಯ ಒದಗಿಸುವ ತೀರ್ಮಾನ ಮಾಡಲಾಗುವುದು ಎಂದರು. ಇನ್ನೂ ಇಂದಿನ ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.