ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದಕ್ಕೆ ಹೈಕಮಾಂಡ್ ಪ್ರಶಂಸೆ ವ್ಯಕ್ತಪಡಿಸಿದೆ. ರಾಜ್ಯ ಕಾಂಗ್ರೆಸ್ ನಾಯಕರ ಸಾಧನೆಯನ್ನು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಡಿಸೆಂಬರ್ 27ರಂದು ನಡೆದಿದ್ದ 19 ಜಿಲ್ಲೆಗಳ ಐದು ನಗರಸಭೆ ಸೇರಿದಂತೆ 58 ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಈ 58 ನಗರ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದು, ಆಡಳಿತರೂಢ ಬಿಜೆಪಿಗೆ ಈ ಫಲಿತಾಂಶದಿಂದ ಮುಖಭಂಗವಾಗಿದೆ.
ಈಗಾಗಲೇ ರಾಜ್ಯ ನಾಯಕರ ಸಾಧನೆಯನ್ನು 'ವೆಲ್ ಡನ್' ಎಂದು ಇಬ್ಬರು ನಾಯಕರು ಪ್ರಶಂಸಿಸಿದ್ದಾರೆ. ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ ಧನ್ಯವಾದ ಅರ್ಪಿಸಿದ್ದಾರೆ.
ಕಳೆದ ಚುನಾವಣೆಗೆ ಹೋಲಿಸಿದರೆ ನಮ್ಮ ಸಾಧನೆ ಉತ್ತಮವಾಗಿದೆ ಎಂದು ಹೇಳಿಕೊಂಡಿರುವ ಬಿಜೆಪಿ ನಾಯಕರು ತಮಗಾಗಿರುವ ಮುಜುಗರವನ್ನು ಪರೋಕ್ಷವಾಗಿ ಮುಚ್ಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆಡಳಿತಾರೂಢ ಬಿಜೆಪಿ ಪ್ರಭಾವವನ್ನು ಮೀರಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬದಲಾವಣೆಯ ಗಾಳಿ ಬೀಸುತ್ತಿದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.
ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಮೆಲುಗೈ.. 'Well done' ಎಂದ ರಾಹುಲ್ ಗಾಂಧಿ!