ಬೆಂಗಳೂರು: ಕೋವಿಡ್-19 ಮಹಾಮಾರಿಯ ಕಾರಣದಿಂದ ಹೇರಿದ್ದ ಲಾಕ್ಡೌನ್ 4.0 ಇಂದು ಕೊನೆಗೊಳ್ಳಲಿದೆ. ನಾಳೆಯಿಂದ ಲಾಕ್ಡೌನ್ 5.0 ಜಾರಿಗೆ ಬರಲಿದ್ದು, ಕರ್ಫ್ಯೂ ಸಮಯವೂ ಬದಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಅಧಿಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಸ್ಪಷ್ಟನೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿನ ಕರ್ಫ್ಯೂ ನಿಯಮವೂ ಸಡಿಲಿಕೆಯಾಗಿದೆ. ಹಿಂದಿನ ಲಾಕ್ಡೌನ್ನಂತೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ ಹೊಸ ಲಾಕ್ಡೌನ್ ಘೋಷಣೆಯಾಗಿದ್ದು, ಕರ್ಫ್ಯೂ ಅವಧಿಯೂ ಕೂಡಾ ಬದಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಮಾತ್ರ ಕರ್ಫ್ಯೂ ಇರಲಿದೆ ಎಂದು ತಿಳಿಸಿದ್ದಾರೆ.
ಇದರ ಜೊತೆಗೆ ಜನರ ಓಡಾಟ, ವ್ಯಾಪಾರ ವಹಿವಾಟು ಇನ್ನಿತರೆ ಸೂಚನೆಗಳ ಬಗ್ಗೆ ರಾಜ್ಯ ಸರ್ಕಾರದ ಮುಂದಿನ ತೀರ್ಮಾನದ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.