ETV Bharat / city

ಕಠಿಣ ಲಾಕ್​ಡೌನ್​ ಮೊರೆ ಹೋದ ರಾಜ್ಯ ಸರ್ಕಾರ : ಏನಿರುತ್ತದೆ? ಏನಿರುವುದಿಲ್ಲ?

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗುತ್ತಿವೆ. ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್- 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು..

lockdown in karnataka
ಕಠಿಣ ಲಾಕ್​ಡೌನ್​ ಮೊರೆ ಹೋದ ರಾಜ್ಯ ಸರ್ಕಾರ: ಏನಿರುತ್ತದೆ..? ಏನಿರುವುದಿಲ್ಲ.?
author img

By

Published : May 7, 2021, 8:45 PM IST

Updated : May 7, 2021, 9:11 PM IST

ಬೆಂಗಳೂರು : ಜನತಾ ಕರ್ಫ್ಯೂ ಸಾಕಷ್ಟು ಯಶಸ್ಸು ಕಾಣದ ಕಾರಣದಿಂದ ಕರ್ನಾಟಕದಲ್ಲಿ ಲಾಕ್​ಡೌನ್ ಮತ್ತಷ್ಟು ಕಠಿಣಗೊಳ್ಳಲಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಕೋವಿಡ್ ನಿಯಂತ್ರಣಕ್ಕೆ ಸಂಪೂರ್ಣ ಲಾಕ್​ಡೌನ್ ಮೊರೆ ಹೋಗಿದೆ.

ಮೇ 10ರ ಬೆಳಗ್ಗೆ 6ರಿಂದ ಮೇ 24ರವರೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿರಲಿದೆ. ಅಗತ್ಯ ಸೇವೆಗಳನ್ನ ಹೊರತುಪಡಿಸಿ ಇನ್ನುಳಿದ ಚಟುವಟಿಕೆಗಳು ಅನುಮತಿ ಇಲ್ಲ ಎಂದು ಸಿಎಂ ಬಿ ಎಸ್​ ಯಡಿಯೂರಪ್ಪ ಘೋಷಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ 50 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗುತ್ತಿವೆ. ಪಾಸಿಟಿವಿಟಿ ದರವೂ ಹೆಚ್ಚಾಗಿದೆ. ರಾಜ್ಯ ಸರ್ಕಾರವು ಕೋವಿಡ್- 19 ನಿಯಂತ್ರಣಕ್ಕಾಗಿ ಏಪ್ರಿಲ್ 26 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು.

ಆದರೆ, ಇದೀಗ ಸೋಂಕು ಹರಡುವುದನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಹೊಸ ಮಾರ್ಗಸೂಚಿಯು ಮೇ 10ರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​

ಈ ಲಾಕ್​ಡೌನ್​ನಲ್ಲಿ ಏನಿರುವುದಿಲ್ಲ..?

  • ಲಾಕ್​ಡೌನ್​ ಅವಧಿಯಲ್ಲಿ ಬಸ್, ಮೆಟ್ರೋ ರೈಲು ಸಂಚಾರ ಇರುವುದಿಲ್ಲ
  • ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು ಬಂದ್​
  • ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್​ಗಳು, ಕ್ರೀಡಾ ಸಂಕೀರ್ಣಗಳು ಬಂದ್​
  • ಈಜುಕೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್​​ಗಳು, ಬಾರ್​ಗಳು ಬಂದ್​
  • ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ
  • ಎಲ್ಲಾ ಧಾರ್ಮಿಕ ಸ್ಥಳಗಳು/ ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ
  • ಜಿಲ್ಲೆಯಿಂದ ಜಿಲ್ಲೆಗೆ ಜನರ ಓಡಾಟಕ್ಕೆ ಅವಕಾಶ ನೀಡದ ಸರ್ಕಾರ

ಲಾಕ್​ಡೌನ್​ನಲ್ಲಿ ಏನಿರುತ್ತದೆ..?

  • ಈಗಾಗಲೇ ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು ಸಂಚರಿಸಲಿವೆ
  • ಟ್ಯಾಕ್ಸಿ ಮತ್ತು ಆಟೋ ರಿಕ್ಷಾಗಳಿಗೆ ತುರ್ತು ಸಂದರ್ಭಗಳಲ್ಲಿ ಅವಕಾಶ
  • ಹೋಟೆಲ್​ಗಳು, ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ
  • ಹೋಂ ಡೆಲಿವರಿ ಸೇವೆಗಳನ್ನು ಮಾತ್ರ ಒದಗಿಸಲು ಅನುಮತಿ
  • ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಒಪನ್
  • ಎಲ್ಲಾ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳಿಗೆ ಅವಕಾಶ
  • ಎಲ್ಲಾ ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆಗೆ ಅವಕಾಶ
  • ಎಲ್ಲಾ ಅಗತ್ಯ ಸರಕು-ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ
  • ಸಾರ್ವಜನಿಕರ ಓಡಾಟಕ್ಕೆ ನಿಷೇಧ, ಕೆಲವು ವಿನಾಯಿತಿಗಳೊಂದಿಗೆ ಅವಕಾಶ
  • ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ತೆರೆಯಲು ಆಹಾರ, ದಿನಸಿ ಅಂಗಡಿಗಳು ಓಪನ್
  • ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಮದ್ಯ ಮಾರಾಟ ಮಳಿಗೆಗಳಲ್ಲಿ ಪಾರ್ಸೆಲ್
  • ದೂರ ಸಂಪರ್ಕ, ಇಂಟರ್ ನೆಟ್ ಸೇವೆ, ಪ್ರಸಾರ ಮತ್ತು ಕೇಬಲ್ ಸೇವೆಗಳು
  • ಅಗತ್ಯ ವಸ್ತುಗಳ ತಯಾರಿಕಾ ಘಟಕಗಳ ಕಾರ್ಯನಿರ್ವಹಣೆಗೆ ಅವಕಾಶ
  • ಐಟಿ ಮತ್ತು ಐಟಿಇಎಸ್ ಕಂಪನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಾರ್ಯನಿರ್ವಹಣೆಗೆ ಅವಕಾಶ
  • ಅಂತ್ಯಸಂಸ್ಕಾರದಲ್ಲಿ ಗರಿಷ್ಠ 5 ಜನರಿಗೆ ಪಾಲುಗೊಳ್ಳಲು ಅವಕಾಶ
  • ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಜನರಿಗೆ ಅವಕಾಶ

Last Updated : May 7, 2021, 9:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.