ETV Bharat / city

ಸಂಸದೀಯ ಮೌಲ್ಯ ಕಾಪಾಡುವಲ್ಲಿ ನಾವೆಲ್ಲ ಎಷ್ಟು ಯಶಸ್ವಿ ಆಗಿದ್ದೇವೆ ಎಂಬುದರ ಬಗ್ಗೆ ಚಿಂತಿಸಬೇಕಿದೆ : ಸ್ಪೀಕರ್ ಓಂ ಬಿರ್ಲಾ - ಕರ್ನಾಟಕ ವಿಧಾನಭೆ

ಸಂಸದೀಯ ಪ್ರಜಾಪ್ರಭುತ್ವವನ್ನು ಅತ್ಯುತ್ತಮ ಆಡಳಿತದ ರೂಪವೆಂದು ಸಾರ್ವತ್ರಿಕವಾಗಿ ಒಪ್ಪಿಕೊಳ್ಳಲಾಗಿದೆ. ಈ ಸನ್ನಿವೇಶದಲ್ಲಿ ನಾವು ಸಂಸದೀಯ ಪ್ರಜಾಪ್ರಭುತ್ವ ಮತ್ತು ಶಾಸಕಾಂಗವನ್ನು ಬಲಪಡಿಸಿದ್ದೇವೆ ಮತ್ತು ಆಡಳಿತದ ವಿವಿಧ ಆಯಾಮಗಳಲ್ಲಿ ಪ್ರಗತಿ ಸಾಧಿಸಿದ್ದೇವೆ. ಪ್ರಜಾಪ್ರಭುತ್ವ ಯಾವಾಗಲೂ ಜನಕೇಂದ್ರಿತವಾಗಿದೆ. ಇದರ ನಿರ್ಮಾತೃಗಳು ಸಂವಿಧಾನವನ್ನು ರೂಪಿಸುವಾಗ ಜನರ ಹಿತಾಸಕ್ತಿಗಳನ್ನು ಮುಖ್ಯಯವಾಗಿ ಗಮನದಲ್ಲಿ ಇಟ್ಟುಕೊಂಡಿದ್ದರು..

Lok Sabha Speaker Om Birla speech in  assembly
ಸಂಸದೀಯ ಮೌಲ್ಯ ಕಾಪಾಡುವಲ್ಲಿ ನಾವೆಲ್ಲ ಎಷ್ಡು ಯಶಸ್ಸಿಯಾಗಿದ್ದೇವೆ ಎಂಬುದರ ಬಗ್ಗೆ ಚಿಂತಿಸಬೇಕಿದೆ: ಸ್ಪೀಕರ್ ಓಂ ಬಿರ್ಲಾ
author img

By

Published : Sep 24, 2021, 6:34 PM IST

ಬೆಂಗಳೂರು : ಸಂಸದೀಯ ಮೌಲ್ಯಗಳನ್ನು ಕಾಪಾಡುವಲ್ಲಿ ನಾವೆಲ್ಲ ಎಷ್ಟು ಯಶಸ್ವಿ ಆಗಿದ್ದೇವೆ ಎಂಬುದರ ಬಗ್ಗೆ ಚಿಂತಿಸಬೇಕಿದೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಭಿಪ್ರಾಯಪಟ್ಟಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಜಾಪ್ರಭುತ್ವ ಸಂಸದೀಯ ಮೌಲ್ಯಗಳ ರಕ್ಷಣೆ ಕುರಿತು ಉಭಯ ಸದನಗಳ ಸದಸ್ಯರುಗಳನ್ನು ಉದ್ದೇಶಿಸಿ ಇಂದು ಭಾಷಣ ಮಾಡಿದ ಅವರು, ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ನಾವು ಇನ್ನಷ್ಟು ಜನರಿಗೆ ಉತ್ತರದಾಯಿತ್ವವನ್ನಾಗಿ ಮಾಡಬೇಕಿದೆ. ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಬಲಪಡಿಸಬೇಕಿದೆ. ಜನಪ್ರತಿನಿಧಿಗಳು ಜನರ ಆಶಯ, ಆಕಾಂಕ್ಷೆಗಳಿಗೆ ಇನ್ನಷ್ಟು ಸಂವೇದನಾಶೀಲರಾಗಬೇಕಿದೆ ಎಂದರು.

ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಸಭೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಇಲ್ಲಿನ ವಿಧಾನಸೌಧ ಕಟ್ಟಡವು ಪ್ರಜಾಪ್ರಭುತ್ವದ ಒಂದು ವಿಶಿಷ್ಟ ಸಂಕೇತವಾಗಿದೆ. ಅದು ಜನರ ಆಶಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಐತಿಹಾಸಿಕ ಕಟ್ಟಡ ಮತ್ತು ಪ್ರಜಾಪ್ರಭುತ್ವದೊಂದಿಗಿನ ಅದರ ಸುದೀರ್ಘ ಪ್ರಯಾಣವು ನಮಗೆ ಹೊಸ ಸ್ಫೂರ್ತಿ ನೀಡುತ್ತದೆ.

ವಿಧಾನಸೌಧವು ಕರ್ನಾಟಕಕ್ಕೆ ಭೇಟಿ ನೀಡುವ ದೇಶೀಯ ಮತ್ತು ವಿದೇಶಿ ಪ್ರವಾಸಿಗರ ಮೇಲೆ ಪ್ರಮುಖವಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಳವಡಿಸಿಕೊಳ್ಳುವಲ್ಲಿ ಸ್ಫೂರ್ತಿ ನೀಡುತ್ತದೆ. ಕರ್ನಾಟಕವು ಶ್ರೀಮಂತ ಮತ್ತು ಅದ್ಭುತವಾದ ಇತಿಹಾಸವನ್ನು ಹೊಂದಿದೆ. ಭಗವಾನ್ ಬಸವೇಶ್ವರರು 12ನೇ ಶತಮಾನದಲ್ಲಿ ನಿರ್ಮಿಸಲಾದ 'ಅನುಭವ ಮಂಟಪ' ಪ್ರಸ್ತುತ ಸಂದರ್ಭದಲ್ಲಿ ಜನಪ್ರತಿನಿಧಿಗಳ ಸಂಸತ್ತಿನ ಪ್ರತಿಬಿಂಬವಾಗಿದೆ. ರಾಣಿ ಚೆನ್ನಮ್ಮನ ಮಹಾನ್ ತ್ಯಾಗವು ನಮಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಬಣ್ಣಿಸಿದರು.

'ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಪ್ರಯಾಣ ರೋಮಾಂಚಕ'

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಪ್ರಯಾಣವು ರೋಮಾಂಚಕ ಮತ್ತು ಸ್ಫೂರ್ತಿದಾಯಕವಾಗಿದೆ. ಈ ಭವ್ಯ ಪ್ರಯಾಣಕ್ಕೆ ಕಾರಣರಾದ ರಾಜಕೀಯ ಮುತ್ಸದ್ಧಿಗಳಿಗೆ ಕೃತಜ್ಞತೆಯನ್ನು ಸಲ್ಲಿಸುವುದಾಗಿ ಹೇಳಿದ ಅವರು, ನಾವು ಅಂತಹವರಿಂದ ಸ್ಫೂರ್ತಿ ಪಡೆಯಬೇಕು ಎಂದರು. ನಮ್ಮ ಈ ಏಳು ದಶಕಗಳ ಸ್ವಾತಂತ್ರ್ಯದ ಅವಧಿಯಲ್ಲಿ ನಾವು ಅನುಸರಿಸಿದ ಸಂಸದೀಯ ರೂಪ ಆಡಳಿತ ಮಾರ್ಗದಲ್ಲಿ ನಾವು ಪ್ರಜಾಪ್ರಭುತ್ವ ಮೌಲ್ಯಗಳನ್ನು ಕಾಪಾಡುವಲ್ಲಿ ಮತ್ತು ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಹೆಚ್ಚು ಜವಾಬ್ದಾರಿಯುತಗೊಳಿಸುವಲ್ಲಿ ನಾವೆಲ್ಲ ಈವರೆಗೆ ಎಷ್ಟರ ಮಟ್ಟಿಗೆ ಯಶಸ್ವಿಯಾಗಿದ್ದೇವೆಂದು ಚಿಂತನೆ ನಡೆಸಬೇಕಿದೆ ಎಂದು ಓಂ ಬಿರ್ಲಾ ಹೇಳಿದರು.

ಸಂಸದೀಯ ಪ್ರಜಾಪ್ರಭುತ್ವವನ್ನು ಅತ್ಯುತ್ತಮ ಆಡಳಿತದ ರೂಪವೆಂದು ಸಾರ್ವತ್ರಿಕವಾಗಿ ಒಪ್ಪಿಕೊಳ್ಳಲಾಗಿದೆ. ಈ ಸನ್ನಿವೇಶದಲ್ಲಿ ನಾವು ಸಂಸದೀಯ ಪ್ರಜಾಪ್ರಭುತ್ವ ಮತ್ತು ಶಾಸಕಾಂಗವನ್ನು ಬಲಪಡಿಸಿದ್ದೇವೆ ಮತ್ತು ಆಡಳಿತದ ವಿವಿಧ ಆಯಾಮಗಳಲ್ಲಿ ಪ್ರಗತಿ ಸಾಧಿಸಿದ್ದೇವೆ. ಪ್ರಜಾಪ್ರಭುತ್ವ ಯಾವಾಗಲೂ ಜನಕೇಂದ್ರಿತವಾಗಿದೆ. ಇದರ ನಿರ್ಮಾತೃಗಳು ಸಂವಿಧಾನವನ್ನು ರೂಪಿಸುವಾಗ ಜನರ ಹಿತಾಸಕ್ತಿಗಳನ್ನು ಮುಖ್ಯಯವಾಗಿ ಗಮನದಲ್ಲಿ ಇಟ್ಟುಕೊಂಡಿದ್ದರು.

ಈ ಕಾರಣದಿಂದಲೇ ಇದುವರೆಗೆ ದೇಶದಲ್ಲಿ 17 ಸಾರ್ವತ್ರಿಕ ಚುನಾವಣೆಗಳು ಮತ್ತು 300ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳು ಯಶಸ್ವಿಯಾಗಿ ನಡೆದಿವೆ. ಮತದಾರರ ಭಾಗವಹಿಸುವಿಕೆಯಲ್ಲಿ ಗಣನೀಯ ಪ್ರಗತಿಯಾಗಿದೆ. ಚುನಾವಣೆಯ ನಂತರ ಅಧಿಕಾರದ ವರ್ಗಾವಣೆ ಅತ್ಯಂತ ಸರಳವಾಗಿ ನಡೆಯುತ್ತಿದೆ. ಇದಕ್ಕೆ ಕಾರಣ ಪ್ರಜಾಪ್ರಭುತ್ವದ ಬಗೆಗಿನ ನಮ್ಮ ಬದ್ಧತೆಯಾಗಿದೆ ಎಂದರು.

'ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆಯಿದೆ'

ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳು ಜನರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತವೆ. ಶಾಸಕಾಂಗಗಳಲ್ಲಿರುವ ನಾವು ಜನರ ಆಶಯಗಳನ್ನು ಮತ್ತು ಆಕಾಂಕ್ಷೆಗಳನ್ನು ಪೂರೈಸುವ ಮಾಧ್ಯಮವಾಗಿದ್ದು, ಅವುಗಳ ಕಲ್ಯಾಣವನ್ನು ಗುರಿಯಾಗಿಸಿಕೊಂಡು ಕಾನೂನು ರೂಪಿಸುತ್ತೇವೆ. ಆದರೆ, ಈಗ ನಾವು ಈ ಪ್ರಯಾಣದ 75 ವರ್ಷಗಳನ್ನು ಪೂರ್ಣಗೊಳಿಸಲಿರುವಾಗ, ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಇನ್ನಷ್ಟು ಉತ್ತರದಾಯಕರನ್ನಾಗಿ ಮಾಡುವುದು ಹೇಗೆ ಎಂದು ನಾವು ಪರಿಶೀಲಿಸಬೇಕಾಗಿದೆ.

ಆಡಳಿತವು ಜನರ ಭಾವನೆಗಳು ಮತ್ತು ಆಕಾಂಕ್ಷೆಗಳೊಂದಿಗೆ ಹೊಂದಿಕೆಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಮತ್ತು ಅವರ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆಯಿದೆ ಎಂದು ಅವರು ಅಭಿಪ್ರಾಯಪಟ್ಟರು. ಸಂಸದೀಯ ಪ್ರಜಾಪ್ರಭುತ್ವವು ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿಯನ್ನು ಆಧರಿಸಿದೆ.

ಚುನಾಯಿತ ಪ್ರತಿನಿಧಿಗಳು ಜನರ ಆಶಯಗಳು ಮತ್ತು ಆಕಾಂಕ್ಷೆಗಳಿಗೆ ಸಂವೇದನಾಶೀಲರಾದಾಗ ಮತ್ತು ಶಾಸಕಾಂಗಗಳ ಮೂಲಕ ಅವುಗಳನ್ನು ಪೂರೈಸಲು ಶ್ರಮಿಸಿದಾಗ ಮಾತ್ರ ಸಂಸತ್ತು ಮತ್ತು ಶಾಸಕಾಂಗದ ಪ್ರತಿಷ್ಠೆ ಹೆಚ್ಚಿಸಬಹುದು. ನಮ್ಮ ಶಾಸಕಾಂಗಗಳು ಪ್ರಜಾಪ್ರಭುತ್ವದ ಆತ್ಮ. ದೇಶಕ್ಕಾಗಿ ನೀತಿಗಳು ಮತ್ತು ಕಾನೂನುಗಳನ್ನು ರೂಪಿಸುವ ಜವಾಬ್ದಾರಿ ಶಾಸಕಾಂಗಗಳ ಹೆಗಲ ಮೇಲಿದೆ ಎಂದರು.

'ಸಾರ್ವಜನಿಕ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ರಚನಾತ್ಮಕ ಚರ್ಚೆಗಳು': ಶಾಸಕಾಂಗಗಳ ಚೌಕಟ್ಟಿನೊಳಗೆ ನಡೆಯುವುದನ್ನು ನಾವು ಖಾತ್ರಿಪಡಿಸಿಕೊಂಡಾಗ ಮಾತ್ರ ನಾವು ಶಾಸಕಾಂಗಗಳನ್ನು ಹೆಚ್ಚು ಜವಾಬ್ದಾರಿಯುತವಾಗಿ ಮಾಡಬಹುದು. ನಮ್ಮ ಶಾಸಕಾಂಗ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಜನರ ಕುಂದುಕೊರತೆಗಳಿಗೆ ಧ್ವನಿ ನೀಡಲು ವಿವಿಧ ದೃಷ್ಟಿ ಕೋನಗಳಲ್ಲಿ ಕೆಲಸ ಮಾಡುತ್ತಿವೆ. ಮತ್ತು ಕಾರ್ಯಾಂಗದ ಜವಾಬ್ದಾರಿಯನ್ನು ಸರಿಪಡಿಸಲು ಕೂಡ ಬಹುವಿಧದ ಆಯಾಮದಲ್ಲಿ ಕೆಲಸ ಮಾಡುತ್ತಿವೆ.

ಇಂತಹ ಗುರುತರವಾದ ಜವಾಬ್ದಾರಿಗಳನ್ನು ಪೂರೈಸಲು, ಶಾಸಕಾಂಗದ ಸದಸ್ಯರು ಪ್ರಜಾಪ್ರಭುತ್ವದ ತತ್ವಗಳು ಮತ್ತು ಮೌಲ್ಯಗಳನ್ನು ಶ್ರದ್ಧೆಯಿಂದ ಪಾಲಿಸಬೇಕು. ಮತ್ತು ಈ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಜನರಿಗೆ ಹೆಚ್ಚು ಪಾರದರ್ಶಕ ಮತ್ತು ಉತ್ತರದಾಯಕವಾಗಿ ಮಾಡುವಂತೆ ನೋಡಿಕೊಳ್ಳಬೇಕು ಎಂದು ಸ್ಪೀಕರ್‌ ಬಿರ್ಲಾ ಅವರು ವಿವರಿಸಿದರು. ಆಡಳಿತದ ಮೂರು ಅಂಗಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಅಧಿಕಾರಗಳು ಮತ್ತು ಕರ್ತವ್ಯಗಳನ್ನು ಸಂವಿಧಾನದಲ್ಲಿ ನಿರ್ದಿಷ್ಟಪಡಿಸಲಾಗಿದೆ.

ಅವುಗಳ ವ್ಯಾಪ್ತಿಯನ್ನು ಕೂಡ ನಿಗದಿಪಡಿಸಲಾಗಿದೆ. ಆದರೂ ಈ ಮೂರರಲ್ಲಿ ಶಾಸಕಾಂಗವು ಪ್ರಮುಖ ಪಾತ್ರವನ್ನು ಹೊಂದಿದೆ. ಯಾಕೆಂದರೆ, ಇದು ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ಕಾನೂನುಗಳನ್ನು ರೂಪಿಸುವ ಸಂಸ್ಥೆಯಾಗಿದೆ. ಸಂವಿಧಾನವನ್ನು ರೂಪಿಸುವಾಗ, ನಮ್ಮ ಶಾಸಕರು ನಮ್ಮ ಜನರ ಸಾಮಾಜಿಕ-ಆರ್ಥಿಕ ಪ್ರಗತಿ ಖಚಿತಪಡಿಸಿಕೊಳ್ಳಲು ನಮ್ಮ ಶಾಸಕಾಂಗವು ಹೆಚ್ಚು ಅರಿವು, ಶ್ರದ್ಧೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯುತವಾಗಿರಬೇಕು ಎಂಬ ಚಿಂತನೆಯೊಂದಿಗೆ ಇದರ ನಿರ್ಮಾತೃಗಳು ಕೆಲಸ ಮಾಡಿದರು.

ನಾವು ರೂಪಿಸುವ ಕಾನೂನಿನ ಬಗ್ಗೆ ಸಮಗ್ರ ಚರ್ಚೆ ಮತ್ತು ಚಿಂತನ-ಮಂಥನ ನಡೆಸಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ. ಈ ಪ್ರಕ್ರಿಯೆಯಲ್ಲಿ ಸಕ್ರಿಯ ಭಾಗವಹಿಸುವಿಕೆ ಇರಬೇಕು. ಅಂತಿಮವಾಗಿ ಕಾನೂನು ರೂಪಗೊಂಡ ಮೇಲೆ ಯಾರು ಇದರ ಬಗ್ಗೆ ಬೆರಳೆತ್ತಿ ನಮ್ಮ ಕಡೆ ತೋರುವಂತಿರಬಾರದು. ಇದಕ್ಕಾಗಿ ನಮ್ಮ ಶಾಸಕಾಂಗಗಳು ಕಾನೂನುಗಳನ್ನು ರೂಪಿಸುವಲ್ಲಿ ಸಮರ್ಥ ಪರಿಣಾಮಕಾರಿಯಾಗಿರಬೇಕು.

ಶಾಸಕರ ಸಾಮರ್ಥ್ಯ ಮತ್ತು ಕೌಶಲ್ಯವನ್ನು ಹೆಚ್ಚಿಸಲು ಶಾಸಕಾಂಗಗಳು ಸಮಗ್ರ ಸಾಮರ್ಥ್ಯ ವೃದ್ಧಿ ಕ್ರಿಯಾ ಯೋಜನೆಯನ್ನು ರೂಪಿಸಬೇಕು.‌ ಆದರೆ, ಅಗತ್ಯವಿರುವ ಮಟ್ಟದಲ್ಲಿ ಚರ್ಚೆಗಳು ಶಾಸಕರ ಭಾಗವಹಿಸುವಿಕೆ ಮತ್ತು ಚಿಂತನೆಗಳು ಚರ್ಚೆಗಳು ನಡೆದಿರುವುದನ್ನು ನಾವು ನೋಡುತ್ತೇವೆ. ಇದು ನಮ್ಮೆಲ್ಲರಿಗೂ ತೀವ್ರ ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವದ ಆಡಳಿತದಲ್ಲಿ ಚುನಾಯಿತ ಜನಪ್ರತಿನಿಧಿಗಳು ತಮ್ಮ ಶಿಸ್ತಿನ ನಡವಳಿಕೆ ಮತ್ತು ಸದ್ಯ ನಡವಳಿಕೆಯಿಂದ ವರ್ತಿಸಿ ಘನತೆ ಎತ್ತಿ ಹಿಡಿಯುವ ಆಶಯ ಹೊಂದಲಾಗಿದೆ. ಹಾಗೆಯೇ ಖಾಸಗಿ ಜೀವನದಲ್ಲಿ ಅವರ ನಡತೆ ಮತ್ತು ವ್ಯವಹಾರಗಳು ಘನತೆಯನ್ನು ಹೆಚ್ಚಿಸಲು ಸಾಮಾನ್ಯವಾಗಿ ಜನರಿಗೆ ಮಾದರಿಯಾಗಬೇಕು. ಸದಸ್ಯರು ತಮ್ಮ ನಡವಳಿಕೆಯೊಂದಿಗೆ ಸಭ್ಯತೆ, ಪ್ರಬುದ್ಧತೆ ಮತ್ತು ಔದಾರ್ಯಗಳನ್ನು ಹೊಂದಿರಬೇಕು. ಹಾಗಾದಾಗ ನಾವು ಸಂಸದೀಯ ಪ್ರಜಾಪ್ರಭುತ್ವದ ಬಗ್ಗೆ ಹೆಮ್ಮೆಪಡಬಹುದು ಎಂದು ಸಲಹೆ ನೀಡಿದರು.

'ಪ್ರತಿಭಟನೆಗಳು ಪ್ರಜಾಪ್ರಭುತ್ವದ ಸಮೃದ್ಧ, ಸಂಸತ್ತಿನ ನಿಯಮಾನುಸಾರವಾಗಿರಬೇಕು'

ಸದನದ ಕಲಾಪದಲ್ಲಿ ಉಂಟಾಗುವ ಅಡಚಣೆಗಳು ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳನ್ನು ಸದನದಲ್ಲಿ ಪ್ರಸ್ತಾಪಿಸಲು ಇರುವ ಅವಕಾಶಗಳನ್ನು ಕಸಿದುಕೊಳ್ಳುತ್ತವೆ. ಇದರಿಂದಾಗಿ ಮಸೂದೆಗಳ ಬಗ್ಗೆ ಚರ್ಚಿಸಲು ಸದನಕ್ಕೆ ಕಷ್ಟವಾಗುತ್ತದೆ. ಈ ಕಾರಣದಿಂದಾಗಿ ಕಾರ್ಯಾಂಗದ ಹೊಣೆಗಾರಿಕೆಯನ್ನು ಖಾತ್ರಿಪಡಿಸುವುದು ಅಸಾಧ್ಯ. ಸದನದಲ್ಲಿ ಯಾವುದೇ ವಿರೋಧ, ಭಿನ್ನಾಭಿಪ್ರಾಯ ಇರಬಾರದು ಎಂದಲ್ಲ. ವಾಸ್ತವವಾಗಿ, ವಿರೋಧ, ಅಭಿಪ್ರಾಯ ಭಿನ್ನತೆ, ಒಪ್ಪಿಗೆ-ಭಿನ್ನಾಭಿಪ್ರಾಯ, ವಾದಗಳು, ಚರ್ಚೆಗಳು ಮತ್ತು ಪ್ರತಿಭಟನೆಗಳು ನಮ್ಮ ಪ್ರಜಾಪ್ರಭುತ್ವವನ್ನು ಸಮೃದ್ಧ ಮತ್ತು ಸಂಸತ್ತಿನ ನಿಯಮಗಳಿಗೆ ಅನುಸಾರವಾಗಿರಬೇಕು ಎಂದರು.

ಸದನದಲ್ಲಿ ನಡೆಯುವ ಚರ್ಚೆಗಳಲ್ಲಿ ಎಲ್ಲರೂ ಪರಸ್ಪರ ಸೌಜನ್ಯ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕು. ಸಂಸದೀಯ ಪ್ರಜಾಪ್ರಭುತ್ವದ ಪರಿಣಾಮಕಾರಿತ್ವ ಮತ್ತು ಘನತೆಗೆ ಧಕ್ಕೆ ತರುವಂತೆ ಜನಪ್ರತಿನಿಧಿಗಳು ಸದನದಲ್ಲಿ ಹಾಗೂ ಸಾರ್ವಜನಿಕವಾಗಿ ವರ್ತಿಸಬಾರದು. ಸದೃಢ ಪ್ರಜಾಪ್ರಭುತ್ವಕ್ಕಾಗಿ ಇಂತಹ ವ್ಯವಸ್ಥೆಯಲ್ಲಿ ಜನರ ನಂಬಿಕೆ ಉಳಿಸಿಕೊಳ್ಳುವುದು ಬಹಳ ಮುಖ್ಯ. ಜನಪ್ರತಿನಿಧಿಗಳು ತಮ್ಮ ನಡವಳಿಕೆಯ ಮೂಲಕ ತಮ್ಮನ್ನು ತಾವು ಪ್ಯಾರಾಗಾನ್‌ಗಳೆಂದು ಪ್ರಸ್ತುತಪಡಿಸಿಕೊಂಡಾಗ ಮಾತ್ರ ಇದನ್ನು ಸಾಧಿಸಬಹುದು. ಇದು ಪ್ರಜಾಪ್ರಭುತ್ವದಲ್ಲಿ ಜನರ ವಿಶ್ವಾಸವನ್ನು ಗಳಿಸಲು ನೆರವಾಗುತ್ತದೆ ಎಂದರು.

ಶಾಸಕಾಂಗಗಳನ್ನು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಬಲಪಡಿಸುವುದು ನಮ್ಮ ಸಂಕಲ್ಪವಾಗಿದೆ. ಅರ್ಥಪೂರ್ಣ ಚರ್ಚೆಗಳು ಮತ್ತು ಸಂವಾದಗಳ ಮೂಲಕ ನಾವು ಆಶಯಗಳನ್ನು ಮತ್ತು ನಿರೀಕ್ಷೆಗಳನ್ನು ಪೂರೈಸಬೇಕು. ಇದರಿಂದ ನಾವು ಪ್ರಜಾಪ್ರಭುತ್ವದ ಮುಂಚೂಣಿಯಲ್ಲಿರುವ ಕುರಿತು ಜಗತ್ತಿಗೆ ಮಾರ್ಗದರ್ಶನ ನೀಡಬಹುದು. ನಾವು ನಮ್ಮ ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ಬಹುಪಕ್ಷೀಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದೇವೆ.

ವಿಭಿನ್ನ ಸಿದ್ಧಾಂತಗಳು ಮತ್ತು ವೈವಿಧ್ಯತೆಗಳ ದೇಶವಾಗಿದ್ದರೂ, ನಾವು ಪ್ರಜಾಪ್ರಭುತ್ವ ಸಂಸ್ಥೆಗಳ ಮೂಲಕ ರಾಜ್ಯ ಮತ್ತು ದೇಶದ ಜನರ ಸೇವೆಯಲ್ಲಿ ಸಾಮೂಹಿಕವಾಗಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದರು. ಜಂಟಿ ಸದನದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತಿತರರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.