ಬೆಂಗಳೂರು: ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಯ (heavy rain in Karnataka) ಕುರಿತು ಮತ್ತು ಈ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ (CM Basavaraj Bommai) ಅಧ್ಯಕ್ಷತೆಯಲ್ಲಿ ಇಂದು ತುರ್ತು ಸಭೆ ನಡೆಯಿತು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಡಾ. ಕೆ ಸುಧಾಕರ್, ಕೋಲಾರ ಸಂಸದ ಮುನಿಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಹೆಚ್ಚು ಮಳೆಯಾಗಿರುವ ಜಿಲ್ಲೆಗಳು, ಹಾನಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳು ಸಿಎಂಗೆ ಮಾಹಿತಿ ನೀಡಿದರು. ರಾಜ್ಯದಲ್ಲಿ ಇನ್ನು ಎಷ್ಟು ದಿನ ಮಳೆಯಾಗುವ ಸಂಭವವಿದೆ ಎಂಬುದರ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದರು.
ಓದಿ: ಚಿಕ್ಕಮಗಳೂರು : ಹಳ್ಳಿಗಳಲ್ಲಿ ಕಣ್ಣಾಯಿಸಿದಲ್ಲೆಲ್ಲ ನೀರೇ ನೀರು.. ಅಧಿಕಾರಿಗಳ ವಿರುದ್ಧ ಅನ್ನದಾತರ ಆಕ್ರೋಶ!