ETV Bharat / city

ಪೌರತ್ವ ಕಾಯ್ದೆ ವಿರೋಧಿ ಕಾಂಗ್ರೆಸ್‌ನವರು ಭಯೋತ್ಪಾದಕರು: ರೇಣುಕಾಚಾರ್ಯ - ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸುದ್ದಿಗೋಷ್ಠಿ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್​ನವರು ಹಾಗೂ ಮಾಜಿ ಸಚಿವ ಯು.ಟಿ ಖಾದರ್ ಭಯೋತ್ಪಾದಕರು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

M P Renukacharya
ರೇಣುಕಾಚಾರ್ಯ
author img

By

Published : Dec 19, 2019, 4:43 PM IST

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್​ನವರು ಹಾಗೂ ಮಾಜಿ ಸಚಿವ ಯು.ಟಿ ಖಾದರ್ ಭಯೋತ್ಪಾದಕರು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸುದ್ದಿಗೋಷ್ಠಿ

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯು.ಟಿ ಖಾದರ್ ಬೆಂಕಿ ಹಚ್ಚುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿದ್ದ ಯು.ಟಿ.ಖಾದರ್ ಇಂತಹ ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಯಾರೇ ಆಗಲಿ ಇಂತಹ ಹೇಳಿಕೆ ನೀಡಿದವರ ವಿರುದ್ದ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್​ಗೆ ಜನ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಪುಲ್ವಾಮಾ ಘಟನೆಗೆ ತಕ್ಕ ನಿರ್ಧಾರ, ಸಂವಿಧಾನದ 370ನೇ ವಿಧಿ, ರಾಮಮಂದಿರ ವಿಚಾರದಂತಹ ಪ್ರಮುಖ ನಿರ್ಧಾರಗಳನ್ನು ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ದೇಶದಲ್ಲಿ ವಾಸವಾಗಿರುವವರ ಪರವಾಗಿ ಕಾಯ್ದೆ ಮಾಡಿದರೆ ಅದನ್ನು ವಿರೋಧ ಮಾಡ್ತಿದ್ದಾರೆ. ಕಾಂಗ್ರೆಸ್ ನಂತಹ ಶತಮೂರ್ಖರು ಯಾರು ಇಲ್ಲ. ವಿದ್ಯಾರ್ಥಿಗಳನ್ನು ಎತ್ತಿಕಟ್ಟುತ್ತಿದ್ದಾರೆ. ಅವರನ್ನು ಬೀದಿಗೆ ಬೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಶಾಸಕ ಪಿ. ರಾಜೀವ್ ಮಾತನಾಡಿ, ಈ ದೇಶವನ್ನು ಕಾಂಗ್ರೆಸ್ ಪಕ್ಷ ಹಾಳುಮಾಡಿದೆ. ಪೌರತ್ವ ಕಾಯ್ದೆ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವ ಕೆಲಸ ಮಾಡಿಲ್ಲ. ಕಾಯ್ದೆಯಲ್ಲಿ ಯಾವುದೇ ತಾರತಮ್ಯ ಇಲ್ಲ. ಕಾಂಗ್ರೆಸ್, ಭಯೋತ್ಪಾದಕರಿಗೆ ಪೌರತ್ವ ಕೊಡಿ ಎಂಬ ರೀತಿ ಪ್ರತಿಭಟನೆ ಮಾಡುತ್ತಿದೆ. ಜನರನ್ನು ದಾರಿ ತಪ್ಪಿಸುತ್ತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

Intro:KN_BNG_2_Renukacharya_Rajiv_Reaction_Video_9024736

Body:KN_BNG_2_Renukacharya_Rajiv_Reaction_Video_9024736

Conclusion:KN_BNG_2_Renukacharya_Rajiv_Reaction_Video_9024736
ETV Bharat Logo

Copyright © 2025 Ushodaya Enterprises Pvt. Ltd., All Rights Reserved.