ETV Bharat / city

ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ - ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಆಯ್ಕೆ - siddaganga Educational Institute

2020 ಮತ್ತು 2021 ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟಿಸಲಾಗಿದೆ. 2020ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಮತಿ ಮೀರಾಬಾಯಿ ಕೊಪ್ಪಿಕರ್​ ಮತ್ತು 2021ನೇ ಸಾಲಿಗೆ ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

siddaganga Educational Institute
ದ್ಧಗಂಗಾ ಶಿಕ್ಷಣ ಸಂಸ್ಥೆ
author img

By

Published : Sep 30, 2021, 8:48 AM IST

Updated : Sep 30, 2021, 9:43 AM IST

ಬೆಂಗಳೂರು/ತುಮಕೂರು: ಸಮಾಜದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ 2020 ಮತ್ತು 2021 ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟಿಸಲಾಗಿದೆ.

ಕೊರೊನಾ ಹಿನ್ನೆಲೆ, ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ. ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆ, ಸರ್ಕಾರವು ಈ ಪ್ರಶಸ್ತಿಗಳನ್ನು ಪ್ರಕಟಿಸಿದೆ. 2020ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀಮತಿ ಮೀರಾಬಾಯಿ ಕೊಪ್ಪಿಕರ್​ ಮತ್ತು 2021ನೇ ಸಾಲಿಗೆ ಶ್ರೀ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ವಿಮಾನದಲ್ಲಿ ಸೀಟ್ ಕೆಳಗೆ ಮರೆಮಾಚಿ ಕಳ್ಳ ಸಾಗಣೆ.. 61 ಲಕ್ಷ ಮೌಲ್ಯದ ಚಿನ್ನ ವಶ

ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಅಶೋಕ್ ಬಂಗಾರೆಪ್ಪಾ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ಐದು ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Last Updated : Sep 30, 2021, 9:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.