ETV Bharat / city

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ್ದ ಪಾದಯಾತ್ರೆ ಪಾಲಿಟಿಕ್ಸ್: ಹೀಗಿದೆ ಲಾಭ ನಷ್ಟ ಲೆಕ್ಕಾಚಾರದ ಹಿನ್ನೋಟ!

author img

By

Published : Jan 3, 2022, 7:00 AM IST

ರಾಜ್ಯ ರಾಜಕೀಯ ಇತಿಹಾಸದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈ ಮುಂಚೆಯೂ ಕೆಲ ಪ್ರಮುಖ ಪಾದಯಾತ್ರೆಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಆ ಮೂಲಕ ಪಾದಯಾತ್ರೆ ನಡೆಸಿದ ಪಕ್ಷಗಳಿಗೆ ಚುನಾವಣೆಗಳಲ್ಲಿ ರಾಜಕೀಯ ಲಾಭವನ್ನೂ ಒದಗಿಸಿಕೊಟ್ಟಿದೆ. ರಾಜ್ಯದಲ್ಲಿ ನಡೆದ ನಿರ್ಣಾಯಕ ಪಾದಯಾತ್ರೆ ಮತ್ತ ಅದರ ಲಾಭ ನಷ್ಟ ಲೆಕ್ಕಾಚಾರದ ಹಿನ್ನೋಟ ಇಲ್ಲಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಇದೀಗ ಕಾಂಗ್ರೆಸ್ ಉದ್ದೇಶಿಸಿರುವ ಮೇಕೆದಾಟು ಪಾದಯಾತ್ರೆ ರಾಜಕೀಯವಾಗಿ ಆರೋಪ - ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಪಾದಯಾತ್ರೆ ಮೂಲಕ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಮೂರು ಪಕ್ಷಗಳಲ್ಲಿ ಪ್ರಾರಂಭವಾಗಿದೆ. ಅಷ್ಟಕ್ಕೂ ಕರ್ನಾಟಕದ ರಾಜಕೀಯದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈವರೆಗೆ ಕರುನಾಡು ಕಂಡಿರುವ ಪ್ರಮುಖ ಪಾದಯಾತ್ರೆ ಪೊಲಿಟಿಕ್ಸ್ ಮತ್ತು ಅದರಿಂದ ಪಕ್ಷಗಳಿಗಾದ ರಾಜಕೀಯ ಲಾಭ ನಷ್ಟದ ವರದಿ ಇಲ್ಲಿದೆ.

ಮೇಕೆದಾಟು ಪಾದಯಾತ್ರೆ:

ಕಾಂಗ್ರೆಸ್ ಮಾಡಲು ಹೊರಟಿರುವ ಪಾದಯಾತ್ರೆ ಇದೀಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾದ ಸುದ್ದಿ. ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡಲು ಹೊರಟಿದೆ. ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಜ.9 ರಿಂದ 19ರವರೆಗೆ 11 ದಿನಗಳ 165 ಕಿ. ಮೀ. ಪಾದಯಾತ್ರೆ ಆರಂಭಿಸುವ ಮೂಲಕ ಹೋರಾಟಕ್ಕೆ ಮುನ್ನುಡಿ ಬರೆಯಲು ಮುಂದಾಗಿದೆ.

ಪಾದಯಾತ್ರೆಗೆ ಕರೆ ನೀಡಿರುವ ಡಿಕೆಶಿಗೆ ಬೆಂಗಳೂರು ಸೇರಿದಂತೆ ರಾಮನಗರದ ಮಟ್ಟಿಗೆ ಮುಂದಿನ ಚುನಾವಣೆಗೆ ಈ ಪಾದಯಾತ್ರೆ ಒಂದಷ್ಟು ಲಾಭ ತಂದುಕೊಡಲಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ. ಇದು ಜೆಡಿಎಸ್ ಪಕ್ಷಕ್ಕೆ ಇರಿಸು ಮುರಿಸು ಮೂಡಿಸಿದೆ. ರಾಜ್ಯ ರಾಜಕೀಯ ಇತಿಹಾಸದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈ ಮುಂಚೆಯೂ ಕೆಲ ಪ್ರಮುಖ ಪಾದಯಾತ್ರೆಗಳಿಗೆ ರಾಜ್ಯ ಸಾಕ್ಷಿಯಾಗಿದೆ.

ಆ ಮೂಲಕ ಪಾದಯಾತ್ರೆ ನಡೆಸಿದ ಪಕ್ಷಗಳಿಗೆ ಚುನಾವಣೆಗಳಲ್ಲಿ ರಾಜಕೀಯ ಲಾಭವನ್ನೂ ಒದಗಿಸಿಕೊಟ್ಟಿದೆ. ರಾಜ್ಯದಲ್ಲಿ ನಡೆದ ನಿರ್ಣಾಯಕ ಪಾದಯಾತ್ರೆ ಮತ್ತ ಅದರ ಲಾಭ ನಷ್ಟ ಲೆಕ್ಕಾಚಾರದ ಹಿನ್ನೋಟ ಇಲ್ಲಿದೆ.

ದೇವೇಗೌಡರ ಪಾದಯಾತ್ರೆ ಪೊಲಿಟಿಕ್ಸ್:

ಹೆಚ್.ಡಿ.ದೇವೇಗೌಡರು 2001ರಲ್ಲಿ ಅಂದಿನ ಎಸ್.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆತಟ್ಟಿ ಪಾದಯಾತ್ರೆಯ ಹೋರಾಟಕ್ಕೆ ಇಳಿದಿದ್ದರು. ನೀರಾ ತೆಗೆಯುವ ವಿವಾದಲ್ಲಿ ಇಬ್ಬರು ರೈತರು ಪೊಲೀಸರು ಹಾರಿಸಿದ್ದ ಗುಂಡಿಗೆ ಅಸುನೀಗಿದ್ದರು. ಆ ವೇಳೆ ತೆಂಗಿಗೆ ನುಸಿರೋಗ ಹೆಚ್ಚಿದ್ದರಿಂದ ನೀರಾ ತೆಗೆಯುವ ವಿಚಾರ ಮುನ್ನೆಲೆಗೆ ಬಂದಿತ್ತು. ಇದೇ ವಿಚಾರವಾಗಿ ನಡೆದ ರೈತರ ಹೋರಾಟದ ಮೇಲೆ ಚನ್ನಪಟ್ಟಣದ ವಿಠಲೇನಹಳ್ಳಿಯಲ್ಲಿ ಗೋಲಿಬಾರ್‌ ನಡೆದು, ಇಬ್ಬರು ರೈತರು ಮೃತಪಟ್ಟಿದ್ದರು.

ಈ ಸನ್ನಿವೇಶವನ್ನು ಬುದ್ದಿವಂತಿಕೆಯಿಂದ ಬಳಸಿಕೊಂಡ ದೊಡ್ಡಗೌಡರು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಎಸ್‌.ಎಂ. ಕೃಷ್ಣ ಸರ್ಕಾರದ ವಿರುದ್ಧ ಪಾದಯಾತ್ರೆ ಸಂಘಟಿಸಿ ಅದರ ಅಲೆಯಲ್ಲಿ ಚುನಾವಣೆ ಗೆದ್ದು ಬಂದಿದ್ದರು. ಇದರ ವಿರುದ್ಧ ದೇವೇಗೌಡರು ಎಸ್.ಎಂ.ಕೃಷ್ಣ ಸರ್ಕಾರದ ವಿರುದ್ಧ ಬೀದಿಗೆ ಇಳಿದಿದ್ದರು.

ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯಿಂದ ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ವರೆಗೆ ದೇವೇಗೌಡರು 2001ರ ಅ.28ರಿಂದ ನ.1ರ ವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಒಟ್ಟು 5 ದಿನಗಳ ಕಾಲ ಸುಮಾರು 80 ಕಿ.ಮೀ ಕ್ರಮಿಸಿ ಪಾದಯಾತ್ರೆ ನಡೆಸಿ, ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.

ಇನ್ನು 2013ರಲ್ಲಿ ಫೆ.12ರಂದು ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ವರಿಷ್ಠ ದೇವೇಗೌಡ ಬೆಂಗಳೂರು ನಗರದಲ್ಲಿ ಪಾದಯಾತ್ರೆ ಕೈಗೊಂಡಿದ್ದರು. ಬನ್ನಪ್ಪ ಪಾರ್ಕ್​ನಿಂದ ಫ್ರೀಡಂ ಪಾರ್ಕ್ ವರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ದೊಡ್ಡಗೌಡರು ನಗರದಲ್ಲಿ ಪಾದಯಾತ್ರೆ ನಡೆಸಿದ್ದರು.

ಜೆಡಿಎಸ್​​ಗೆ ಲಾಭ ತಂದು ಕೊಟ್ಟ ಪಾದಯಾತ್ರೆ:

ದೇವೇಗೌಡರು ಕಾಂಗ್ರೆಸ್ ಸರ್ಕಾರದ ಗೋಲಿಬಾರ್ ವಿರುದ್ಧ ನಡೆಸಿದ ಪಾದಯಾತ್ರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್​​ಗೆ ಭರ್ಜರಿ ರಾಜಕೀಯ ಲಾಭವನ್ನು ಕೊಟ್ಟಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದ ಕ್ಷೇತ್ರಗಳಲ್ಲಿ ಪಾರುಪತ್ಯ ಸಾಧಿಸಿತು. ಎಸ್.ಎಂ.ಕೃಷ್ಣ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ‌ ಅಲೆಯ ಜೊತೆಗೆ ದೊಡ್ಡಗೌಡರು ನಡೆಸಿದ ಪಾದಯಾತ್ರೆ ಹೋರಾಟವೂ ಜೆಡಿಎಸ್​​ಗೆ ಭಾರಿ ಲಾಭ ತಂದು ಕೊಟ್ಟಿತು.

2004ರ ಚುನಾವಣೆಯಲ್ಲಿ ಜೆಡಿಎಸ್ 58 ಸ್ಥಾನ ಗೆದ್ದು ಬೀಗಿತು. ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ 37 ಸ್ಥಾನಗಳನ್ನು ಗೆದ್ದು ಪಾದಯಾತ್ರೆ ಪೊಲಿಟಿಕ್ಸ್ ಶಕ್ತಿಯನ್ನು ತೋರಿಸಿಕೊಟ್ಟಿತು. 1999ರಲ್ಲಿ ಹಳೆ ಮೈಸೂರು ಭಾಗದಲ್ಲಿ 3 ಸ್ಥಾನ ಗೆದ್ದಿದ್ದ ಜೆಡಿಎಸ್ 2004ರಲ್ಲಿ 37 ಸ್ಥಾನ ಗೆದ್ದು ಬೀಗಿತು. 1999 ಚುನಾವಣೆಯಲ್ಲಿ 11.45 ರಷ್ಟು ಇದ್ದ ಜೆಡಿಎಸ್​​​ನ ಮತ ಪ್ರಮಾಣ 2004 ಚುನಾವಣೆಯಲ್ಲಿ ಶೇ 21.10ಗೆ ಏರಿಕೆ ಕಂಡಿತು. ಇದರಿಂದ ಪಕ್ಷಕ್ಕೆ ಮೈತ್ರಿ ಸರ್ಕಾರ ನಡೆಸಲು ಸಾಧ್ಯವಾಯಿತು.

ಅದೇ ರೀತಿ 2013ರಲ್ಲಿ ಕುಡಿಯುವ ನೀರು ಸಂಬಂಧ ಬೆಂಗಳೂರಲ್ಲಿ ಮಾಡಿದ ಪಾದಯಾತ್ರೆಯಿಂದಲೂ ಜೆಡಿಎಸ್​​ಗೆ ಪರೋಕ್ಷವಾಗಿ ಪಕ್ಷ ಸಂಘಟನೆಗೆ ಬಲ ನೀಡಿತು. 2013 ಚುನಾವಣೆಯಲ್ಲಿ ಜೆಡಿಎಸ್ ಬೆಂಗಳೂರು ನಗದರಲ್ಲಿ ಮೊದಲ ಬಾರಿಗೆ 3 ಸ್ಥಾನವನ್ನು ಗೆಲ್ಲುವಂತಾಯಿತು.

ಎಸ್.ಎಂ.ಕೃಷ್ಣರಿಂದ ಕಾವೇರಿ ಪಾದಯಾತ್ರೆ:

2002ರಲ್ಲಿ ಸಿಎಂ ಆಗಿದ್ದ ಎಸ್.ಎಂ.ಕೃಷ್ಣ ಪಾದಯಾತ್ರೆಯ ಮೊರೆ ಹೋಗಿದ್ದರು. ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ಎಸ್.ಎಂ.ಕೃಷ್ಣ ಪಾದಯಾತ್ರೆ ಕೈಗೊಂಡು ಕಾವೇರಿ ಪ್ರಾಂತ್ಯದ ಜನರ ಮನಗೆಲ್ಲುವ ಯತ್ನ ಮಾಡಿದ್ದರು. ಈ ಸಂದರ್ಭದಲ್ಲಿ ನೀರು ಹಂಚಿಕೆ ವಿಚಾರ ಸುಪ್ರೀಂಕೋರ್ಟ್‌ ಮುಂದೆ ಇದ್ದದ್ದರಿಂದ ಈ ಪಾದಯಾತ್ರೆಗೆ ಭಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಎಸ್.ಎಂ.ಕೃಷ್ಣ ಅವರು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ 2002 ಅ.7ರಿಂದ ಅ.11ರ ವರೆಗೆ 6 ದಿನಗಳ ಪಾದಯಾತ್ರೆ ಕೈಗೊಂಡಿದ್ದರು.

ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಮಂಡ್ಯದವರೆಗೆ 100 ಕಿ.ಮೀ. ದೂರ ಪಾದಯಾತ್ರೆ ನಡೆಸಿದ್ದರು. ಆ ಮೂಲಕ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿದ್ದರು. ಆದರೆ 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಇದರಿಂದ ಹೆಚ್ಚಿನ ರಾಜಕೀಯ ಲಾಭ ಲಭಿಸಲಿಲ್ಲ. ಬಲವಾದ ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಆ ಚುನಾವಣೆಯಲ್ಲಿ ಕೊಚ್ಚಿ ಹೋಗಿತ್ತು.

ಸಿದ್ದರಾಮಯ್ಯ ಅವರ ಬಳ್ಳಾರಿ ಪಾದಯಾತ್ರೆ:

ಬಳ್ಳಾರಿಯಲ್ಲಿ ಬಿಜೆಪಿಯ ರೆಡ್ಡಿ ಹಾಗೂ ಶ್ರೀರಾಮುಲು ಪ್ರಾಬಲ್ಯದ ವಿರುದ್ದ ತೊಡೆತಟ್ಟಿದ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಈ ಐತಿಹಾಸಿಕ ಪಾದಯಾತ್ರೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದಲ್ಲದೇ, ಕಾಂಗ್ರೆಸ್ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿತು. ಅದು 2010. ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ಆಗ ಅಧಿಕಾರದಲ್ಲಿ ಪ್ರಾಬಲ್ಯ ಹೊಂದಿದ್ದು, ಗಣಿ ಧಣಿಗಳಾದ ಜನಾರ್ದನ್ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು. ರಾಜ್ಯ ವಿಧಾನಸಭೆಯಲ್ಲಿ 'ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ರೆಡ್ಡಿ ಬ್ರದರ್ಸ್ ಸವಾಲು ಹಾಕಿದ್ದರು.

'ಬಳ್ಳಾರಿ ಚಲೋ':

ವಿಧಾನಸಭೆಯಲ್ಲೇ ಬಳ್ಳಾರಿ ಗಣಿ ಧಣಿಗಳ ಸವಾಲು ಸ್ವೀಕರಿಸಿದ ಸಿದ್ದರಾಮಯ್ಯ ಭುಜತಟ್ಟಿ, ನಾವು ಬಳ್ಳಾರಿಗೆ ಬಂದೇ ಬರುತ್ತೇವೆ. ನಡೆದುಕೊಂಡೇ ಬರುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದರು. ಆಗ ಹುಟ್ಟಿದ್ದೇ ಬಳ್ಳಾರಿ ಪಾದಯಾತ್ರೆ. 2010ರ ಜು.25ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ 'ಬಳ್ಳಾರಿ ಚಲೋ' ಪಾದಯಾತ್ರೆ ಆರಂಭವಾಯಿತು. ಬೆಂಗಳೂರಿನಿಂದ ಬಳ್ಳಾರಿಗೆ ಹೊರಟ ಪಾದಯಾತ್ರೆ ಸಮಾರೋಪ ಆಗಿದ್ದು ಆ.8ರಂದು. ಅಂದು ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಿ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರು ಗಣಿ ಧಣಿಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಅಬ್ಬರಿಸಿದ್ದರು.

'ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ':

2013ರಲ್ಲಿ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ 'ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ' ಎಂಬ ಪಾದಯಾತ್ರೆ ನಡೆಸಿದ್ದರು. ಕೃಷ್ಣಾದ ಎ ಮತ್ತು ಬಿ ಸ್ಕೀಮ್‌ನಡಿ ಪೂರ್ಣ ಪ್ರಮಾಣದ ನೀರು ಬಳಸಿಕೊಳ್ಳಲು ಸರಕಾರ ವೈಫಲ್ಯ ಹಾಗೂ ನೀರಾವರಿ ಯೋಜನೆಗೆ ಅನುಷ್ಠಾನದಲ್ಲಿನ ವೈಫಲ್ಯ ವಿರೋಧಿಸಿ ಚುನಾವಣಾ ಪೂರ್ವ ಜ.7ರಿಂದ 14 ರವರೆಗೆಕಾಂಗ್ರೆಸ್ ನಡಿಗೆ - ಕೃಷ್ಣೆಯ ಕಡೆಗೆ ಎಂಬ ಯಾತ್ರೆ ಕೈಗೊಂಡಿತ್ತು.

ಕೃಷ್ಣ ಯೋಜನೆಯಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳದೇ ಇರುವುದರಿಂದ 259 ಟಿಎಂಸಿ ನೀರು ಆಂಧ್ರಕ್ಕೆ ಹೋಗುತ್ತಿದೆ. ಅಲ್ಲಿನ ನೀರಾವರಿ ಯೋಜನೆಗೆ 17 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ನೀಡಿದ್ದ ಬಿಜೆಪಿ, ಕೇವಲ 500 ಕೋಟಿ ರೂ. ನೀಡಿದೆ ಎಂಬ ಪ್ರಮುಖ ಅಜೆಂಡಾದೊಂದಿಗೆ ಪಾದಯಾತ್ರೆ ನಡೆಸಲಾಗಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಜೆಟ್‌ನಲ್ಲಿ ಇದಕ್ಕೆ 10 ಸಾವಿರ ಕೋಟಿ ರೂ. ಮೀಸಲಿಡಲಾಗುವುದೆಂಬ ಭರವಸೆಯೊಂದಿಗೆ ಪಾದಯಾತ್ರೆ ನಡೆಸಿತ್ತು. ಹೊಸಪೇಟೆಯಿಂದ ಆರಂಭಗೊಂಡು ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳದ ಮಾರ್ಗವಾಗಿ ಕೂಡಲಸಂಗಮದಲ್ಲಿ ಸಮಾರೋಪಗೊಂಡು ಸುಮಾರು 140 ಕಿ.ಮೀ ಪಾದಯಾತ್ರೆ ನಡೆಸಲಾಯಿತು.

ಪಾದಯಾತ್ರೆಯಿಂದ ಗದ್ದುಗೆ ಹಿಡಿದ ಕಾಂಗ್ರೆಸ್:

ಬಳ್ಳಾರಿ ಪಾದಯಾತ್ರೆ ಹಾಗೂ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಪಾದಯಾತ್ರೆ ಮೂಲಕ ಕಾಂಗ್ರೆಸ್ 2013ರ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಭಾರಿಸಿತು. ಸಿದ್ದರಾಮಯ್ಯ ಅವರ ಬಳ್ಳಾರಿ ಪಾದಯಾತ್ರೆ ಪರಿಣಾಮ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಳ್ಳಾರಿ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 4ರಲ್ಲಿ ಚಿಗುರೊಡೆದಿತ್ತು. ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 4ರಿಂದ 6ಸ್ಥಾನಗಳಿಗೆ ಏರಿಕೆ ಕಂಡಿತ್ತು.

2013ರ ಚುನಾವಣೆಯಲ್ಲಿ ಕಾಂಗ್ರೆಸ್ 122 ಸ್ಥಾನದ ಮೂಲಕ ಬಹುಮತದ ಗೆಲುವು ಸಾಧಿಸಿತ್ತು. ತನ್ನ ಮತ ಪ್ರಮಾಣವನ್ನು ಶೇ 36.76ಗೆ ಏರಿಕೆ ಮಾಡಿಕೊಂಡಿತ್ತು. ತಮ್ಮ ಪಾದಯಾತ್ರೆಗಳ ಮೂಲಕ ಕಾಂಗ್ರೆಸ್ 2013ರಲ್ಲಿ ಮುಂಬೈ ಕರ್ನಾಟಕ‌ ಭಾಗದಲ್ಲಿನ 56 ಸ್ಥಾನಗಳ ಪೈಕಿ 34 ಸ್ಥಾನ ಗೆದ್ದಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ 19 ಸ್ಥಾನದಲ್ಲಿ ಗೆದ್ದು ಬೀಗಿತ್ತು. ಅದೇ ರೀತಿ ಮಧ್ಯ ಕರ್ನಾಟಕ ಭಾಗದಲ್ಲಿ 32 ಸ್ಥಾನಗಳ ಪೈಕಿ 18 ಸೀಟು ಗೆದ್ದಿತ್ತು. ಆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 40 ಸ್ಥಾನಕ್ಕೆ ಕುಸಿತ ಕಂಡಿತು.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಚಾಮರಾಜನಗರದಲ್ಲಿ ಸಿದ್ದು, ಡಿಕೆಶಿ ಜಂಟಿ ಸಭೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.