ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದ್ದಾರೆ.
ಮದ್ಯದಂಗಡಿಗಳು ಬಂದ್ ಆಗಿರುವುದರಿಂದ ಮದ್ಯಕ್ಕೆ ಭಾರೀ ಬೇಡಿಕೆ ಇದೆ. ಹೀಗಾಗಿ ರಾಮಮೂರ್ತಿನಗರದಲ್ಲಿ ಅಕ್ರಮವಾಗಿ ವಿಸ್ಕಿ ಮಾರುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 1 ಸಾವಿರ ಟೆಟ್ರಾ ಪ್ಯಾಕ್ ವಿಸ್ಕಿ ವಶಕ್ಕೆ ಪಡೆದುಕೊಳ್ಳಲಾಗಿದೆ.