ದೊಡ್ಡಬಳ್ಳಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು 10 ಕಿ.ಮೀ ದೂರದವರೆಗೂ ರೈಲು ಹೊತ್ತೊಯ್ದಿದ್ದು ಕಂಡುಬಂದಿದೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಸಮೀಪದ ವೀರಾಪುರದ ರೈಲ್ವೆ ಟ್ರ್ಯಾಕ್ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದೆ.
ಮೃತ ಯುವಕನನ್ನು ರಮೇಶ್(31) ಎಂದು ಗುರುತಿಸಲಾಗಿದೆ. ತಾಲೂಕಿನ ತಿಪ್ಪಾಪುರ ಗ್ರಾಮದ ನಿವಾಸಿಯಾದ ಯುವಕ ಇಂಡೋ ಮಿಮ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.