ETV Bharat / city

ಅಂಬರೀಶ್​​ ಅಭಿಮಾನಿಗಳ ಪ್ರತಿಭಟನೆ: 'ಅಪ್ಪು' ಕಳೆದುಕೊಂಡು ನೊಂದಿರುವ ಮನಕ್ಕೆ ಬರೆ ಎಳೆಯಬೇಡಿ ಎಂದ ಸುಮಲತಾ

ರೆಬಲ್​ ಸ್ಟಾರ್​ ಅಂಬರೀಶ್​ ಅಭಿಮಾನಿಗಳ ಸಂಘ ಪ್ರತಿಭಟನೆ ವಿಚಾರವಾಗಿ ಸಂಸದೆ ಸುಮಲತಾ ಅಂಬರೀಶ್​ ಅವರು ಪ್ರತಿಕ್ರಿಯಿಸಿದ್ದಾರೆ. ಅಪ್ಪುವನ್ನು ಕಳೆದುಕೊಂಡು ನೊಂದಿರುವ ಸಮಯದಲ್ಲಿ ಇಂತಹ ಹೋರಾಟಗಳು ಬೇಡ. ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ, ಹಾಗೂ ನಿಮ್ಮೆಲ್ಲರ ಬೇಡಿಕೆಗೆ ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ, ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆಯವಂತೆ ಕೋರಿದ್ದಾರೆ.

sumalatha-ambareesh
ಸುಮಲತಾ ಅಂಬರೀಶ್
author img

By

Published : Nov 23, 2021, 6:36 PM IST

ಬೆಂಗಳೂರು: ಪುನೀತ್​ ರಾಜಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತದಲ್ಲಿರುವ ಸಂದರ್ಭದಲ್ಲಿ ಅಂಬರೀಶ್​ ಅವರ ಸ್ಮಾರಕ ಅಭಿವೃದ್ಧಿಯಂತಹ ಹೋರಾಟ ಸಮಂಜಸವಲ್ಲ. ಇದರಿಂದ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ ಎಂದು ಸಂಸದೆ ಸುಮಲತಾ ಅವರು ಅಂಬರೀಶ್​ ಅಭಿಮಾನಿ ಸಂಘಟನೆಗಳ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

  • " class="align-text-top noRightClick twitterSection" data="">

ಈ ಕುರಿತು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸಂಸದೆ, 'ನಮ್ಮ ಪ್ರೀತಿಯ ಡಾ. ಅಂಬರೀಶ್ ಅವರನ್ನು ಆರಾಧ್ಯ ದೈವದಂತೆ ಪ್ರೀತಿಸಿ, ಅವರ ನೆನಪನ್ನು ಚಿರಸ್ಥಾಯಿಯಾಗಿ ಬೆಳಗಿಸುತ್ತಿರುವ ನೆಚ್ಚಿನ ಅಭಿಮಾನಿ ಸಂಘಗಳು ಹಾಗೂ ಇನ್ನಿತರ ಸಂಘಟನೆಗಳು ಇಂದು ಅಂಬರೀಶ್ ಅವರ ಸ್ಮಾರಕ ಅಭಿವೃದ್ಧಿಗೊಳಸುವುದು, ಅವರ ಹೆಸರಿನಲ್ಲಿ ರಸ್ತೆಗಳನ್ನು ನಾಮಕರಣ ಮಾಡುವುದು ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ಮಾಡುವುದಾಗಿ ಹೇಳಿರುವುದು ಸಾಮಾಜಿಕ ಜಾಲತಾಣಗಳ ಮೂಲಕ ನನ್ನ ಗಮನಕ್ಕೆ ಬಂದಿದೆ.

ನಮ್ಮ ಕುಟುಂಬದೊಂದಿಗೆ ಅತಿ ಹೆಚ್ಚು ಒಡನಾಟ ಹೊಂದಿದ್ದ ಹಾಗೂ ನಮ್ಮ ಮನೆ ಮಗನಂತಿದ್ದ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡಿರುವ ಆಘಾತಕಾರಿ ಘಟನೆಯಿಂದ ನನಗಾಗಿರುವ ನೋವನ್ನು ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇದರೊಂದಿಗೆ ಚಿತ್ರರಂಗ, ಅಭಿಮಾನಿಗಳು, ಹಾಗೂ ಕರ್ನಾಟಕ ರಾಜ್ಯದ ಜನತೆಗೆ ತುಂಬಲಾರದಂತ ನಷ್ಟ ಉಂಟಾಗಿದ್ದು, ಈ ಸಮಯದಲ್ಲಿ ತಾವುಗಳು ಹೋರಾಟ ಮಾಡುವ ನಿರ್ಧಾರ ಮಾಡಿರುವುದು ಎಲ್ಲರ ಹೃದಯದ ಮೇಲೆ ಆಗಿರುವ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಆದುದರಿಂದ, ಈ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಸವಲ್ಲ.

ನಿಮ್ಮ ಭಾವನೆಗಳನ್ನು ನಾನು ಗೌರವಿಸುತ್ತೇನೆ, ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸುವುದರಿಂದ ಅಂಬರೀಶ್​ ಅವರ ಘನತೆ ಹಾಗೂ ಗೌರವಕ್ಕೆ ಧಕ್ಕೆಯಾಗುತ್ತದೆ. ಯಾವುದೇ ಪ್ರಶಸ್ತಿಯಾದರು ಕೇಳಿ ಪಡೆಯುವುದು ಸರಿಯಲ್ಲ. ಎಲ್ಲಾ ಪ್ರಶಸ್ತಿಗಳನ್ನು ಮೀರಿದಂತ ಪ್ರೀತಿ ಮತ್ತು ಅಭಿಮಾನವನ್ನು ನೀವುಗಳು ನಮ್ಮ ಕುಟುಂಬಕ್ಕೆ ನೀಡಿದ್ದೀರಿ. ಅಂಬರೀಷ್ ಅವರು ತಮ್ಮ ಜೀವನದಲ್ಲಿ ಯಾವ ಪ್ರಶಸ್ತಿ, ಹುದ್ದೆ ಅಥವಾ ಸನ್ಮಾನವನ್ನು ಬಯಸಿದವರಲ್ಲ. ಹೀಗಾಗಿ ಅಂಬರೀಷ್ ಅವರ ಅಭಿಮಾನಿಗಳಾಗಿ ತಾವುಗಳು ಸಹ ಅವರ ಹಾದಿಯಲ್ಲಿ ನಡೆಯಬೇಕು ಎನ್ನುವುದು ನನ್ನ ಆಶಯ. ಆದುದರಿಂದ, ಈ ಸಮಯದಲ್ಲಿ ಪ್ರಶಸ್ತಿ ಕೋರಿ ಹೋರಾಟ ಅಥವಾ ಪ್ರತಿಭಟನೆ ನಡೆಸುವುದು ಅಂಬರೀಶ್​ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವಿಷಯವಾಗಿದೆ.

ಆದುದರಿಂದ, ತಮ್ಮೆಲ್ಲರ ಅಭಿಮಾನ ಮತ್ತು ಪ್ರೀತಿ-ವಾತ್ಸಲ್ಯಗಳನ್ನು ಗೌರವಿಸುತ್ತ, ಹಾಗೂ ನಿಮ್ಮೆಲ್ಲರ ಆಸೆಯನ್ನು ಮುಂದಿನ ದಿನಗಳಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಈಡೇರಿಸುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳ ಮೇಲೆ ಭರವಸೆಯನ್ನು ಇಡುತ್ತಾ, ತಾವು ತೆಗೆದುಕೊಂಡಿರುವ ಈ ಹೋರಾಟದ ನಿರ್ಧಾರವನ್ನು ಹಿಂಪಡೆದು ನವೆಂಬರ್ 24ನೇ ತಾರೀಕಿನಂದು ಅಂಬರೀಷ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯನ್ನು ಶಾಂತಿಯುತವಾಗಿ ನೆರವೇರಿಸುವ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರೋಣ' ಎಂದು ಅಭಿಮಾನಿಗಳಲ್ಲಿ ಸುಮಲತಾ ಅಂಬರೀಶ್​ ಅವರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.