ETV Bharat / city

ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಮುಂಗಾರು ಮಳೆ ಸಾಧ್ಯತೆ!

ರಾಜ್ಯಕ್ಕೆ ಜೂನ್​ ಮೊದಲ ವಾರದಲ್ಲಿ ವಾಡಿಕೆಯಂತೆ ಮುಂಗಾರು ಬರಲಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

mansoon
ಮಾನ್ಸೂನ್​​
author img

By

Published : May 14, 2020, 11:49 PM IST

ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿರುವ ರೈತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿ ವಾಡಿಕೆಯಂತೆ ಮುಂಗಾರು ಮಳೆ ಈ ತಿಂಗಳ ಅಂತ್ಯಕ್ಕೆ ಅಥವಾ ಜೂನ್ ಮೊದಲ ವಾರದಲ್ಲೇ ಆರಭವಾಗಲಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ಶ್ರೀನಿವಾಸ್ ರೆಡ್ಡಿ

ಈ ಬಾರಿ ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಎಂಟ್ರಿಯಾಗುವ ಸಾಧ್ಯತೆ ಇದೆ. ಅಲ್ಲದೆ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗುವ ಸಂಭವ ಇದೆ. ಇದೇ ತಿಂಗಳು 16ಕ್ಕೆ ಮುಂಗಾರು ಅಂಡಮಾನ್-ನಿಕೋಬಾರ್ ದ್ವೀಪ ಪ್ರವೇಶಿಸಲಿದೆ.

ಕೇರಳಕ್ಕೆ ಜೂನ್ ಮೊದಲ ವಾರವೇ ಪ್ರವೇಶಿಸುವ ಸಾಧ್ಯತೆ ಇದ್ದು, ಜೂನ್ 5 ಅಥವಾ ಆರಕ್ಕೆ ಮುಂಗಾರು ರಾಜ್ಯಕ್ಕೆ ಪ್ರವೇಶ ಪಡೆಯುವ ಸಾಧ್ಯತೆ ಇದೆ. ಕಳೆದ ವರ್ಷ ಕೂಡ ಜೂನ್ ಆರಕ್ಕೆ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿತ್ತು. ಅದೇ ರೀತಿ ಈ ಬಾರಿ ಜೂನ್ ಮೊದಲ ವಾರದಲ್ಲೇ ಮುಂಗಾರು ಪ್ರವೇಶಿಸಲಿದ್ದು, ಶೇಕಡಾ 71ರಷ್ಟು ಉತ್ತಮ ಮಳೆಯಾಗುವ ವಾತಾವರಣ ಇದೆ ಎಂದು ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.