ಬೆಂಗಳೂರು: ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ ಧವಳಗಿರಿಗೆ ಇಂದು ಬೆಳಗ್ಗೆಯೇ ಹಲವು ಶಾಸಕರು ಆಗಮಿಸಿದ್ದು ಯಡಿಯೂರಪ್ಪನವರ ಜೊತೆ ಮಾತುಕತೆ ನಡೆಸಿದ್ದಾರೆ.
ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ ಕ್ಷೇತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಶಾಸಕ ಆನಂದ್ ಸಿಂಗ್ ಕೂಡಾ ಭೇಟಿ ನೀಡಿದ್ದು, ಸಿಎಂ ಜೊತೆ ನೂತನ ವಿಜಯನಗರ ಜಿಲ್ಲೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಇನ್ನು ನಿನ್ನೆ ಶಾಸಕ ಸೋಮಶೇಖರ ರೆಡ್ಡಿ ಸಿಎಂ ಭೇಟಿ ಮಾಡಿ ಬಳ್ಳಾರಿ ಜಿಲ್ಲೆ ವಿಭಜನೆ ವಿಚಾರವನ್ನು ವಿರೋಧಿಸಿದ್ದು, ಇದ್ರ ಬೆನ್ನಲ್ಲೇ ಆನಂದ್ ಸಿಂಗ್ ಇಂದು ಸಿಎಂ ನಿವಾಸಕ್ಕೆ ಆಗಮಿಸಿದ್ದರು.