ETV Bharat / city

ಮೊಸರಲ್ಲಿ ಕಲ್ಲು ಹುಡುಕುವ ಕಾಂಗ್ರೆಸ್ಸಿಗರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ : ಸಚಿವ ಆರ್. ಅಶೋಕ್​ - ಉಚಿತ ಲಸಿಕೆ

ಕೋವಿಡ್‌ನಿಂದ ಮರಣ ಹೊಂದಿದವರ ಮನೆಗೆ ಹೋಗಿ ಸಾಂತ್ವನ ಹೇಳುವುದು ನಮ್ಮ ಜವಾಬ್ದಾರಿ. ಈ ಕುರಿತು ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಇದೊಂದು ಕಷ್ಟದ ಘಳಿಗೆಯಾಗಿದೆ. ನಮ್ಮ ಸರ್ಕಾರ ಸಂಪೂರ್ಣವಾಗಿ ಬಡವರ ಹಾಗೂ ನೆರವಿನ ನಿರೀಕ್ಷೆಯಲ್ಲಿರುವವರ ಜೊತೆಯಲ್ಲಿ ನಿಲ್ಲಲಿದೆ..

may-god-give-the-good-brine-to-congress
ಸಚಿವ ಆರ್ ಅಶೋಕ್​​
author img

By

Published : Jun 22, 2021, 4:56 PM IST

Updated : Jun 22, 2021, 5:06 PM IST

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶಕ್ಕೆ ಉಚಿತ ಲಸಿಕೆ ನೀಡಿದ್ದಾರೆ. ಯಡಿಯೂರಪ್ಪನವರು 1500 ಕೋಟಿಗೂ ಹೆಚ್ಚು ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್‌ನಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ಘೋಷಿಸಿದೆ. ಇಷ್ಟೆಲ್ಲಾ ಕೆಲಸಗಳನ್ನ ಮಾಡುತ್ತಿದ್ದರೂ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ ಎಂದು ಕಂದಾಯ ಸಚಿವ ಆರ್​ ಅಶೋಕ್​ ಕಿಡಿಕಾರಿದರು.

ಇಂದು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಆಟೋಚಾಲಕರು, ಬೀದಿಬದಿ ವ್ಯಾಪಾರಿಗಳು ಸೇರಿ ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವರ್ಗದವರಿಗೆ ದಿನಸಿ ಕಿಟ್​ಗಳನ್ನು ವಿತರಿಸಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಉಚಿತ ಲಸಿಕೆ ನೀಡಿದೆ. ರಾಜ್ಯ ಸರ್ಕಾರ ಕೂಡ ಕೋವಿಡ್‌ನಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ಘೋಷಿಸಿದೆ.

may-god-give-the-good-brine-to-congress
ಬ್ಯಾಟರಾಯನಪುರದಲ್ಲಿ ಆರ್​ ಅಶೋಕ್​ ಫುಡ್​ ಕಿಟ್​ ವಿತರಣೆ

ಇಷ್ಟೆಲ್ಲಾ ಕೆಲಸಗಳನ್ನ ಮಾಡುತ್ತಿದ್ದರೂ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಬರೀ ಪೊಳ್ಳು ಟೀಕೆ, ಆಪಾದನೆಗಳಲ್ಲಿ ಕಾಲ ಕಳೆಯುತ್ತಿದೆ. ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ. ಕಷ್ಟದ ಸಂದರ್ಭಗಳಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕಾಂಗ್ರೆಸ್ ವೃಥಾ ಆರೋಪಗಳನ್ನ ಮಾಡುತ್ತಿದೆ.

ವಿರೋಧ ಪಕ್ಷಗಳು ಏನೇ ಮಾತನಾಡಿದರು ನಾವು ಮಾತ್ರ ಸದಾ ಜನರ ಕಷ್ಟದಲ್ಲಿ ಜೊತೆಯಾಗಿರುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬದ ಬೆಂಬಲಕ್ಕೆ ನಿಲ್ಲುವ ನಿಟ್ಟಿನಲ್ಲಿ ನಾನೂ ಹಾಗೂ ಆರು ಜನ ಸಚಿವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಅಂಥಹ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳುವುದರ ಜೊತೆಗೆ ಪರಿಹಾರ ಹಣವನ್ನು ನೀಡಿದ್ದೇವೆ.

ಕೋವಿಡ್‌ನಿಂದ ಮರಣ ಹೊಂದಿದವರ ಮನೆಗೆ ಹೋಗಿ ಸಾಂತ್ವನ ಹೇಳುವುದು ನಮ್ಮ ಜವಾಬ್ದಾರಿ. ಈ ಕುರಿತು ಪಕ್ಷದ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಇದೊಂದು ಕಷ್ಟದ ಘಳಿಗೆಯಾಗಿದೆ. ನಮ್ಮ ಸರ್ಕಾರ ಸಂಪೂರ್ಣವಾಗಿ ಬಡವರ ಹಾಗೂ ನೆರವಿನ ನಿರೀಕ್ಷೆಯಲ್ಲಿರುವವರ ಜೊತೆಯಲ್ಲಿ ನಿಲ್ಲಲಿದೆ ಎಂದು ಕಂದಾಯ ಸಚಿವರು ತಿಳಿಸಿದರು.

Last Updated : Jun 22, 2021, 5:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.