ETV Bharat / city

ಬಿಬಿಎಂಪಿ ಒಡೆತನದ ಆಸ್ತಿಗಳ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ ಮೇಯರ್​

ಪಾಲಿಕೆ ಒಡೆತನದ 7,906 ಆಸ್ತಿಗಳ ಪೈಕಿ 324 ಆಸ್ತಿಗಳನ್ನು ಗುತ್ತಿಗೆ ನೀಡಲಾಗಿದ್ದು, 165 ಆಸ್ತಿಗಳ ಗುತ್ತಿಗೆ ಅವಧಿ ಚಾಲ್ತಿಯಲ್ಲಿವೆ. 159 ಆಸ್ತಿಗಳ ಗುತ್ತಿಗೆ ಅವಧಿ ಮುಗಿದಿದ್ದು, ಅದರಲ್ಲಿ ಕೆಲವನ್ನು ಹಸ್ತಾಂತರ ಮಾಡಿಕೊಳ್ಳಲಾಗಿದೆ. ಕೆಲವನ್ನು ಹಸ್ತಾಂತರ ಮಾಡಿಕೊಳ್ಳಬೇಕಿದೆ. ಆ ಬಗ್ಗೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Mayor having a meeting with BBMP officials
ಬಿಬಿಎಂಪಿ ಒಡೆತನದ ಆಸ್ತಿಗಳ ವಿಚಾರವಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮೇಯರ್
author img

By

Published : Jun 10, 2020, 8:16 PM IST

Updated : Jun 10, 2020, 8:47 PM IST

ಬೆಂಗಳೂರು: ನಗರದಲ್ಲಿ ಪಾಲಿಕೆ ಒಡೆತನದ ಆಸ್ತಿಗಳ ವಿಚಾರವಾಗಿ ಒಟ್ಟಾರೆ ಆಸ್ತಿ, ಗುತ್ತಿಗೆ ನೀಡಿರುವ ಆಸ್ತಿಗಳು, ಪಾಲಿಕೆಗೆ ವಶಕ್ಕೆ ಪಡೆದಿರುವ ಆಸ್ತಿಗಳು, ಪಾಲಿಕೆ ಆಸ್ತಿಗಳ ಸಂರಕ್ಷಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಬಿಬಿಎಂಪಿ ಮೇಯರ್ ಅಧ್ಯಕ್ಷತೆಯಲ್ಲಿ ಇಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಯಿತು.

ಬಿಬಿಎಂಪಿ ಒಡೆತನದ ಆಸ್ತಿಗಳ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ ಮೇಯರ್​

ಈ ಸಭೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಒಡೆತನಕ್ಕೆ ಒಳಪಟ್ಟ ಎಲ್ಲಾ ಆಸ್ತಿಗಳ ದಾಖಲಾತಿಗಳನ್ನು ಒಂದೆಡೆ ಸಂಗ್ರಹಿಸಿ ಡಿಜಿಟಲೈಸೇಷನ್‌ ಮಾಡಿ ಸುಸಜ್ಜಿತವಾದ “ಸ್ಟ್ರಾಗ್ ರೂಂ” ನಿರ್ಮಿಸಬೇಕು. ಅದಕ್ಕೆ ಒಬ್ಬ ಅಧಿಕಾರಿಯನ್ನು ನಿಯೋಜಿಸುವ ಕುರಿತು ಮೇಯರ್ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ‌. ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಮೇಯರ್ ಗೌತಮ್ ಕುಮಾರ್, ಪಾಲಿಕೆ ಒಡೆತನದ 7,906 ಆಸ್ತಿಗಳ ಪೈಕಿ 324 ಆಸ್ತಿಗಳನ್ನು ಗುತ್ತಿಗೆ ನೀಡಲಾಗಿದ್ದು, 165 ಆಸ್ತಿಗಳ ಗುತ್ತಿಗೆ ಅವಧಿ ಚಾಲ್ತಿಯಲ್ಲಿದೆ. 159 ಆಸ್ತಿಗಳ ಗುತ್ತಿಗೆ ಅವಧಿ ಮುಗಿದಿದ್ದು, ಅದರಲ್ಲಿ ಕೆಲವನ್ನು ಹಸ್ತಾಂತರ ಮಾಡಿಕೊಳ್ಳಲಾಗಿದೆ. ಕೆಲವನ್ನು ಹಸ್ತಾಂತರ ಮಾಡಿಕೊಳ್ಳಬೇಕಿದೆ. ಆ ಬಗ್ಗೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ಆಸ್ತಿಗಳಿಗೆ ಫೆನ್ಸಿಂಗ್ ಮಾಡಲು ಪಾಲಿಕೆ ಆಯವ್ಯಯದಲ್ಲಿ 20 ಕೋಟಿ ರೂ. ಮೀಸಲಿಡಲಾಗಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಅಲ್ಲದೆ ಪಾಲಿಕೆ ಒಡೆತನಕ್ಕೆ ಒಳಪಟ್ಟ ಆಸ್ತಿಗಳನ್ನು ನಿಗದಿತ ಸಮಯದಲ್ಲಿ ಹಿಂಪಡೆಯಲು ಕ್ರಮ ವಹಿಸಬೇಕು. ಈ ಸಂಬಂಧ ಪಾಲಿಕೆ ಆಸ್ತಿಗಳ ಸ್ಥಳದಲ್ಲಿ ನಾಮಫಲಕ ಅಳವಡಿಸಲು ಕ್ರಮ ವಹಿಸಲಾಗುವುದು. ಜೊತೆಗೆ ಸರ್ಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಾಲಿಕೆಗೆ ಹಸ್ತಾಂತರಿಸಿರುವ ಆಸ್ತಿಗಳ ಪಟ್ಟಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಎಲ್ಲಾ ಆಸ್ತಿಗಳನ್ನು ಸಂಬಂಧಪಟ್ಟ ಸಬ್ ರಿಜಿಸ್ಟ್ರಾರ್​ ಕಚೇರಿಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಲು ಸೂಚಿಸಲಾಗಿದೆ. ಗುತ್ತಿಗೆ (ಲೀಜ್) ನೀಡಿರುವ ಎಲ್ಲಾ ಕಟ್ಟಡಗಳ ದಾಖಲಾತಿಗಳನ್ನು ಪುನರ್ ಪರಿಶೀಲಿಸಿ ಯಾವ್ಯಾವ ಆಸ್ತಿಗಳ ಗುತ್ತಿಗೆ ಮುಗಿದಿದೆ ಅವರಿಗೆ ಇಂದಿನ ಮಾರುಕಟ್ಟೆ ದರ ನಿಗದಿಪಡಿಸುವುದು. ಭೂ ಮಾಪಕರು ಪ್ರತಿಯೊಂದು ಆಸ್ತಿ ಬಳಿ ತೆರಳಿ ಆಸ್ತಿಗಳ ಮೌಲ್ಯಮಾಪನ ಮಾಡುವುದರ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅದಲ್ಲದೆ ಆಸ್ತಿಗಳಿಗೆ ಪಿಐಡಿ(Property ID) ಸಂಖ್ಯೆ ನೀಡಲು ಸೂಚನೆ ನೀಡಲಾಗಿದೆ.

ನ್ಯಾಯಾಲಯದಲ್ಲಿರುವ ಕೆಲವು ಆಸ್ತಿಗಳನ್ನು ಆಸ್ತಿ ವಿಭಾಗ ಹಾಗೂ ಕಾನೂನು ಕೋಶದ ಮುಖ್ಯಸ್ಥರು ಚರ್ಚಿಸಿ ಪರಿಶೀಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಸಹಾಯಕ ಕಂದಾಯ ಅಧಿಕಾರಿಗಳು ಎಲ್ಲಾ ವಲಯಗಳಲ್ಲಿ ಬರುವ ಆಸ್ತಿಗಳ ಪಟ್ಟಿ ಸಿದ್ಧಪಡಿಸುವಂತೆ ತಿಳಿಸಲಾಗಿದೆ ಎಂದರು.

Last Updated : Jun 10, 2020, 8:47 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.