ETV Bharat / city

ಸೇವೆ ಕಾಯಂಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ: ಸರ್ಕಾರಕ್ಕೆ ಗುತ್ತಿಗೆ ವೈದ್ಯರ ಕೊನೆಯ ಎಚ್ಚರಿಕೆ! - ಕೊರೊನಾ

ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ತಮ್ಮ ಸೇವೆ ಕಾಯಂ ಮಾಡುವಂತೆ ಒತ್ತಾಯಿಸಿ, ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಹಾಗಾಗಿ ನಾಳೆಯಿಂದ ನಾವು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಗುತ್ತಿಗೆ ವೈದ್ಯರು ಹೇಳಿದ್ದಾರೆ.

mbbs doctors
ಎಂಬಿಬಿಎಸ್​​​ ವೈದ್ಯರು
author img

By

Published : Jul 7, 2020, 12:43 PM IST

ಬೆಂಗಳೂರು: ಸರ್ಕಾರದ ಗಮನ ಸೆಳೆಯಲು ಕಪ್ಪು ಪಟ್ಟಿ‌ ಧರಿಸಿ ಕೆಲಸಕ್ಕೆ ಹಾಜರಾಗಿದ್ದ ಗುತ್ತಿಗೆ ವೈದ್ಯರು ಇಂದು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲವೆಂದು ಅವರು ಆರೋಪಿಸಿದ್ದಾರೆ.

ಸರ್ಕಾರಕ್ಕೆ ಎಂಬಿಬಿಎಸ್ ಗುತ್ತಿಗೆ ​ವೈದ್ಯರ ಕೊನೆಯ ಎಚ್ಚರಿಕೆ

ಹಳ್ಳಿಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ಸೇವೆ ಕಾಯಂಗೆ ಒತ್ತಾಯಿಸಿ ಕೊನೆ ದಿನದ ಹೋರಾಟಕ್ಕೆ ಮುಂದಾಗಿದ್ದಾರೆ‌‌. ನಾಳೆಯಿಂದ ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಸತತ 4-5 ವರ್ಷಗಳಿಂದ ಮನವಿ ಮಾಡಿದರೂ ಸರ್ಕಾರ, ಸಚಿವರು ಯಾರೂ ಸ್ಪಂದಿಸುತ್ತಿಲ್ಲ.‌ ಹೀಗಾಗಿ ನಾಳೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ. ನಮ್ಮ‌ ಕೆಲಸವನ್ನು ಇಂದಿಗೆ‌ ಕೊನೆಗೊಳಿಸಲಿದ್ದೇವೆ ಅಂತ ವೈದ್ಯರು ತಿಳಿಸಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ಸಮಸ್ಯೆಯಾದರೆ ನಮ್ಮನ್ನ ದೂಷಿಸಬೇಡಿ ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.