ETV Bharat / city

ಎಂ ಸಿ ಮನಗೂಳಿ ಮತ್ತು ದೇವಾನಂದ್​ ಚೌಹಾಣ್ ಪಕ್ಷ ಬಿಡುವುದಿಲ್ಲ.. ಜೆಡಿಎಸ್‌ ಅಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ - ದೇವಾನಂದ್​ ಚೌವ್ಹಾಣ್

ಶಾಸಕರಾದ ಎಂ ಸಿ ಮನಗೂಳಿ ಹಾಗೂ ದೇವಾನಂದ್​ ಚೌಹಾಣ್ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹೆಚ್.ಕೆ ಕುಮಾರಸ್ವಾಮಿ
author img

By

Published : Oct 2, 2019, 6:46 PM IST

ಬೆಂಗಳೂರು : ಶಾಸಕರಾದ ಎಂ ಸಿ ಮನಗೂಳಿ ಹಾಗೂ ದೇವಾನಂದ್​ ಚೌಹಾಣ್ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ ಶಾಸಕರ ಕುರಿತು ಹೆಚ್ ಕೆ ಕುಮಾರಸ್ವಾಮಿ ಪ್ರತಿಕ್ರಿಯೆ..

ಜೆಡಿಎಸ್ ಕಚೇರಿಯಲ್ಲಿ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಬ್ಬರೂ ಶಾಸಕರು ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಅವರಿಬ್ಬರೂ ಸಹ ತಮ್ಮ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಎಂದು ಹೇಳಿದರು.

ಇನ್ನು, ದೇಶವನ್ನು ಸಂಪೂರ್ಣ ಬಹಿರ್ದೆಸೆ ಮುಕ್ತ ಭಾರತ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಇವತ್ತು ಹೇಳಿದ್ದಾರೆ. ಇದು ಬರೀ ಘೋಷಣೆಯಾಗಬಾರದು. ಸಂಪೂರ್ಣವಾಗಿ ಜಾರಿಗೆ ಬರಬೇಕು. ಶಿವಪುರದಲ್ಲಿ ಪಂಚಾಯತ್‌ ಕಚೇರಿ ಬಳಿ ಬಹಿರ್ದೆಸೆ ಮಾಡಿದರೆಂಬ ಕಾರಣಕ್ಕೆ ದಲಿತ ಮಕ್ಕಳಿಬ್ಬರನ್ನು ಹತ್ಯೆ ಮಾಡಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಹೀಗೆ ಶಿಕ್ಷೆ ನೀಡಬಾರದು. ಈ ಕುರಿತು ಜಾಗೃತಿ ಮೂಡಿಸಬೇಕು ಎಂದು ಒತ್ತಾಯಿಸಿದರು.

Intro:ಬೆಂಗಳೂರು : ಜೆಡಿಎಸ್ ಶಾಸಕರಾದ ಎಂ.ಸಿ. ಮನಗೂಳಿ ಹಾಗೂ ದೇವಾನಂದ ಚೌವ್ಹಾಣ್ ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. Body:ಜೆಡಿಎಸ್ ಕಚೇರಿಯಲ್ಲಿ ಮಹತ್ಮಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಬ್ಬರೂ ಶಾಸಕರು ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಅವರಿಬ್ಬರೂ ಸಹ ತಮ್ಮ ಪಕ್ಷಕ್ಕೆ ನಿಷ್ಠರಾಗಿದ್ದಾರೆ ಎಂದು ಹೇಳಿದರು.
ಬಹಿರ್ದೆಸೆ ಮುಕ್ತ ಭಾರತ ಘೋಷಣೆ ಆಗಬಾರದು : ದೇಶವನ್ನು ಸಂಪೂರ್ಣ ಬಹಿರ್ದೆಸೆ ಮುಕ್ತ ಭಾರತ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಇವತ್ತು ಹೇಳಿದ್ದಾರೆ. ಬರೀ ಘೋಷಣೆಯಾಗಬಾರದು. ಸಂಪೂರ್ಣ ಜಾರಿಗೆ ಬರಬೇಕು ಎಂದರು.
ಶಿವಪುರ ಜಿಲ್ಲೆಯಲ್ಲಿ ಪಂಚಾಯಿತಿ ಕಚೇರಿ ಬಳಿ ಬಹಿರ್ದೆಸೆ ಮಾಡಿದರೆಂಬ ಕಾರಣಕ್ಕೆ ದಲಿತ ಮಕ್ಕಳಿಬ್ಬರನ್ನು ಹತ್ಯೆ ಮಾಡಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಇರಬಹುದು. ಜನಪ್ರತಿನಿದಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮುಕ್ತ ಬಹಿರ್ದೆಸೆ ಆಗಿದೆ ಎಂಬುದನ್ನು ಪುನರ್ ವಿಮರ್ಶೆ ಮಾಡಿಕೊಳ್ಳಬೇಕು. ದೇಶದಲ್ಲಿ, ನಮ್ಮ ರಾಜ್ಯದಲ್ಲಿ ಬಹಿರ್ದಸೆ ಮುಕ್ತವಾಗಿಲ್ಲ. ಮುಕ್ತವಾಗಿ ಘೋಷಣೆ ಮಾಡುವುದು ತಪ್ಪಿದೆ. ಇನ್ನು ಕೆಲ ವರ್ಷ ತೆಗೆದುಕೊಳ್ಳಬೇಕು. ಭಾಷಣಗಳಿಂದ ಆಗುವುದಿಲ್ಲ. ಇದಕ್ಕೆ ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.