ಬೆಂಗಳೂರು : ಲಾಕ್ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಇರುವವರಿಗೆ ಆಹಾರ ವಿತರಿಸುವ ಕುರಿತು ಕೆಪಿಸಿಸಿ ಕಚೇರಿಯಲ್ಲಿ ನಗರ ಜಿಲ್ಲಾಧ್ಯಕ್ಷ, ಬ್ಲಾಕ್ ಅಧ್ಯಕ್ಷರು ಹಾಗೂ ಪ್ರಮುಖ ಮುಖಂಡರ ಜೊತೆ ಕೆಪಿಸಿಸಿ ರಚಿಸಿರುವ ಬೆಂಗಳೂರು ನಗರ ಕಾರ್ಯಪಡೆ ಅಧ್ಯಕ್ಷ ಹಾಗೂ ಶಾಸಕ ರಾಮಲಿಂಗಾರೆಡ್ಡಿ ಅವರು ಇಂದು ಸಭೆ ನಡೆಸಿದರು.
ಕೋವಿಡ್-19 ಕಾಡುತ್ತಿರುವ ಹಿನ್ನೆಲೆಯಲ್ಲಿ ನಿರಾಶ್ರಿತರಿಗೆ, ವಲಸೆ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ವಿತರಿಸುವ ಹಾಗೂ ಅಗತ್ಯ ವಸ್ತುಗಳನ್ನು ಪೂರೈಸುವ ಕುರಿತು ವಿಚಾರ ವಿನಿಮಯ ಮಾಡಲಾಯಿತು. ಶಾಸಕ ದಿನೇಶ್ ಗುಂಡೂರಾವ್, ಸಂಸದ ಡಿ ಕೆ ಸುರೇಶ್, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ವೈದ್ಯರ ಘಟಕದ ಸಭೆ : ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ ಹಾಗೂ ಸಲೀಂ ಅಹ್ಮದ್ ಅವರು ಇಂದು ಬೆಳಗ್ಗೆ ಕೆಪಿಸಿಸಿ ವೈದ್ಯರ ಘಟಕದ ಸಭೆ ನಡೆಯಿತು. 75ಕ್ಕೂ ಹೆಚ್ಚು ವೈದ್ಯರನ್ನು ಒಳಗೊಂಡಂತಹ ವಿಶೇಷ ಘಟಕವನ್ನು ಕಾಂಗ್ರೆಸ್ ಸ್ಥಾಪಿಸಿದೆ. ನಾಳೆ ಕಾರ್ಯಾರಂಭ ಮಾಡಲಿದೆ. ಘಟಕದ ಕಾರ್ಯನಿರ್ವಹಣೆ ಯಾವ ರೀತಿ ಇರಬೇಕು ಎಂಬ ಕುರಿತು ಡಿಕೆಶಿ ವೈದ್ಯರಿಗೆ ವಿವರಿಸಿದರು.