ETV Bharat / city

ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ : ಸಚಿವ ಬೈರತಿ ಬಸವರಾಜ್​

author img

By

Published : Aug 19, 2021, 11:25 PM IST

ಹೊಸ ಬಡಾವಣೆ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ನಗರಾಭಿವೃದ್ಧಿ ಪ್ರಾಧಿಕಾರಗಳ ಸಂಪನ್ಮೂಲ ಹೆಚ್ಚಿಸಬಹುದು ಮತ್ತು ಪ್ರಾಧಿಕಾರದ ನಿರ್ವಹಣೆಗೆ ಅನುಕೂಲವಾಗುತ್ತದೆ. ಕಾನೂನು ತೊಡಕು ಇದ್ದಲ್ಲಿ ಅದನ್ನು ಇಲಾಖೆಯ ಕಾರ್ಯದರ್ಶಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ನಿವಾರಿಸಿಕೊಳ್ಳಲು ಮುಂದಾಗಬೇಕು ಎಂದು ಆಯುಕ್ತರುಗಳಿಗೆ ಸಚಿವ ಬೈರತಿ ಬಸವರಾಜ್ ಸೂಚಿಸಿದರು.

meeting-of-commissioners-of-urban-development-authority
ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಿ : ಸಚಿವ ಬೈರತಿ ಬಸವರಾಜ್​

ಬೆಂಗಳೂರು : ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ಸಮಗ್ರ ಅಭಿವೃದ್ಧಿ ಯೋಜನೆ ನಕ್ಷೆ ತಯಾರಿಸಲು ಎಲ್ಲಾ ಆಯುಕ್ತರುಗಳಿಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಸಭೆ ನಡೆಸಿ ಮಾತನಾಡಿದ ಅವರು, 2021ರ ಸೆಪ್ಟೆಂಬರ್ 30ರೊಳಗೆ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಗೆ ಬರುವ ಬಡಾವಣೆ ಅಭಿವೃದ್ಧಿ, ನಗರ ಅಭಿವೃದ್ಧಿ, ಕೆರೆ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಿಡಿಪಿಯನ್ನು ನಗರಾಭಿವೃದ್ಧಿ ಇಲಾಖೆ ಮತ್ತು ನಗರ ಹಾಗೂ ಗ್ರಾಮಾಂತರ ಯೋಜನಾ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು ಎಂದು ಗಡುವು ನೀಡಿದರು.

ಕೆಲ ಪ್ರಾಧಿಕಾರದ ಅಭಿವೃದ್ಧಿ ಯೋಜನೆ ವಿಚಾರದಲ್ಲಿ ಪ್ರಕರಣಗಳು ಇರುವುದರಿಂದ ಅಂತಹ ಪ್ರಾಧಿಕಾರಗಳಿಗೆ ಅಕ್ಟೋಬರ್ ಮತ್ತು ನವೆಂಬರ್ 30ರೊಳಗೆ ಸಲ್ಲಿಸಲು ಅವಕಾಶ ‌ನೀಡಿದ್ದಾರೆ. ಕೆಲ ಪ್ರಾಧಿಕಾರದ ಸುಪರ್ದಿಯಲ್ಲಿ ಇರುವ ಮೂಲೆ ಮತ್ತು ಮಧ್ಯಂತರ ನಿವೇಶನಗಳನ್ನು ಹರಾಜು ಪ್ರಕ್ರಿಯೆಯಲ್ಲಿ ಮಾರಾಟ ಮಾಡಲು ಸೂಚಿಸಿದರು. ಇದರಿಂದ ಪ್ರಾಧಿಕಾರಕ್ಕೆ ಆದಾಯ ಬರುತ್ತದೆ. ಅಲ್ಲದೆ, ಹೊಸ ಬಡಾವಣೆ ನಿರ್ಮಾಣಕ್ಕೆ ಒತ್ತು ನೀಡುವ ಮೂಲಕ ನಗರಾಭಿವೃದ್ಧಿ ಪ್ರಾಧಿಕಾರಗಳ ಸಂಪನ್ಮೂಲ ಹೆಚ್ಚಿಸಬಹುದು ಮತ್ತು ಪ್ರಾಧಿಕಾರದ ನಿರ್ವಹಣೆಗೆ ಅನುಕೂಲವಾಗುತ್ತದೆ. ಕಾನೂನು ತೊಡಕು ಇದ್ದಲ್ಲಿ ಅದನ್ನು ಇಲಾಖೆಯ ಕಾರ್ಯದರ್ಶಿ, ಮೇಲಿನ ಅಧಿಕಾರಿಗಳ ಗಮನಕ್ಕೆ ತಂದು ನಿವಾರಿಸಿಕೊಳ್ಳಲು ಮುಂದಾಗಬೇಕು ಎಂದು ಆಯುಕ್ತರುಗಳಿಗೆ ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎಂ.ಎನ್. ಅಜಯ್ ನಾಗಭೂಷಣ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ‌ಎಲ್. ಶಶಿಕುಮಾರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.