ಬೆಂಗಳೂರು: ಮಾರ್ಚ್ 21ರಿಂದ 28ರವರೆಗೆ ಮೆಜೆಸ್ಟಿಕ್ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದೆ.
ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ಮುಂದಿನ ತಿಂಗಳು ಪರೀಕ್ಷಾರ್ಥ ರೈಲು ಸಂಚಾರ ನಡೆಸಲು ಬಿಎಂಆರ್ಸಿಎಲ್ ಮುಂದಾಗಿದ್ದು, ಇದಕ್ಕಾಗಿ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ಮಾರ್ಗದಲ್ಲಿ ಸಿಗ್ನಲಿಂಗ್ ವ್ಯವಸ್ಥೆ ಮಾರ್ಪಾಡು ಮಾಡುವ ಕಾಮಗಾರಿ ಪ್ರಾರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದ 28ರವರೆಗೆ ನೇರಳೆ ಮಾರ್ಗದಲ್ಲಿನ ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ಮೈಸೂರು ರಸ್ತೆ ಮೆಟ್ರೊ ನಿಲ್ದಾಣದವರೆಗೆ ರೈಲು ಸಂಚಾರ ಬಂದ್ ಆಗಿದೆ. ಮೆಜೆಸ್ಟಿಕ್ನಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಮಾತ್ರ ಎಂದಿನಂತೆ ಮೆಟ್ರೋ ರೈಲು ಸಂಚರಿಸಲಿದೆ.
ಓದಿ: 9ರಲ್ಲಿ 8 ಬೇಡಿಕೆ ಈಡೇರಿಸಿದರೂ ಯಾರ ಮೇಲಿನ ದ್ವೇಷಕ್ಕಾಗಿ ಮತ್ತೆ ಮುಷ್ಕರ: ಲಕ್ಷ್ಮಣ ಸವದಿ