ಬೆಂಗಳೂರು : ಮುನಿಸು ಮರೆತ ಸಚಿವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಇಂದು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು. ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈ ವೇಳೆ ಕಂದಾಯ ಸಚಿವ ಆರ್.ಅಶೋಕ್, ಶಾಸಕ ರಾಜೂಗೌಡ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಆನಂದ್ ಸಿಂಗ್ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಾನು ಭೇಟಿ ಮಾಡಿದ್ದೆ. ಅವರಿಗೆ ನನ್ನ ಮನವಿ ಮುಟ್ಟಿಸಿದ್ದೇನೆ. ಸಿಎಂ ಕೂಡ ವರಿಷ್ಠರ ಜೊತೆ ಚರ್ಚಿಸುತ್ತೇನೆ ಎಂದಿದ್ದಾರೆ. ಹೀಗಾಗಿ, ಪಕ್ಷ ಹಾಗೂ ಅವರ ಮಾತಿಗೆ ಬೆಲೆ ನೀಡುತ್ತಿದ್ದೇನೆ. ನಾನು ಇದೀಗ ಅಧಿಕಾರ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.
'ಯಾವುದೇ ಗೊಂದಲವಿಲ್ಲ'
ಈ ವೇಳೆ ಸಚಿವ ಆರ್.ಅಶೋಕ್ ಮಾತನಾಡಿ, ಆನಂದ್ ಸಿಂಗ್ ಜೊತೆ ಮಾತನಾಡಿದ್ದೇವೆ. ಎಲ್ಲವೂ ಬಗೆಹರಿದಿದೆ. ಯಾವುದೇ ಗೊಂದಲ ಇಲ್ಲ. ಅವರು ಸಂತೋಷವಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ ಎಂದರು. ಯಾವುದೇ ಅಸಮಾಧಾನವಿಲ್ಲ. ನಾಳೆ ಸಿಎಂ ಕೂಡ ದೆಹಲಿಗೆ ತೆರಳುತ್ತಿದ್ದಾರೆ. ಅಲ್ಲಿ ವರಿಷ್ಠರ ಜೊತೆ ಚರ್ಚೆ ಮಾಡಿ ಬರುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ : ಕಾಬೂಲ್ನಿಂದ ಜನರನ್ನು ಸ್ಥಳಾಂತರಿಸುತ್ತಿದ್ದ Ukrainian Plane ಹೈಜಾಕ್?