ಬೆಂಗಳೂರು: ಸಚಿವ ಆನಂದ್ ಸಿಂಗ್ ನಡೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ? ಅಥವಾ ಸಚಿವರಾಗಿ ಮುಂದುವರಿಯುತ್ತಾರಾ? ಎಂಬುದು ಯಕ್ಷ ಪ್ರಶ್ನೆಯಾಗಿದೆ.
ಕೆಲವೇ ಕ್ಷಣಗಳಲ್ಲಿ ವಿಧಾನಸೌಧಕ್ಕೆ ಸಚಿವ ಆನಂದ್ ಸಿಂಗ್ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು, ಬಿಎಸ್ವೈ ಭೇಟಿಯ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.